ಶನಿವಾರ, ನವೆಂಬರ್ 23, 2019
18 °C

ನದಿಯಲ್ಲಿ ಕೊಚ್ಚಿ ಹೋಗಿದ್ದ ಒಬ್ಬರ ಮೃತದೇಹ ಪತ್ತೆ

Published:
Updated:

ಶಿವಮೊಗ್ಗ: ಕುಮುದ್ವತಿ ನದಿಯಲ್ಲಿ ಎರಡು ತಿಂಗಳ ಹಿಂದೆ ಕೊಚ್ಚಿಹೋಗಿದ್ದ ಅಮರನಾಥ್ ಅವರ ಮೃತದೇಹ ಸೋಮವಾರ ದೊಡ್ಡಿಮಟ್ಟಿ ಬಳಿ ಪತ್ತೆಯಾಗಿದೆ.

ಕುಂಸಿ–ಚೋರಡಿ ಮಧ್ಯೆ ತುಂಬಿ ಹರಿಯುತ್ತಿದ್ದ ನದಿ ನೋಡಲು ಆ.10ರಂದು ಹೋಗಿದ್ದ ನಾಲ್ವರು ಸಾಗರ–ಶಿವಮೊಗ್ಗ ರಸ್ತೆಯಲ್ಲಿ ನಿರ್ಮಿಸಿರುವ ಹೊಸ ಸೇತುವೆಯ ಮೇಲೆ ನಿಂತಿದ್ದರು. ಆಗ ವೇಗವಾಗಿ ಬಂದ ಜೀಪ್‌ ಡಿಕ್ಕಿಯಾಗಿ ನದಿಗೆ ಬಿದ್ದಿದ್ದರು. ಅವರಲ್ಲಿ ಒಬ್ಬರನ್ನು ಸ್ಥಳೀಯರು ರಕ್ಷಿಸಿದ್ದರು.

ಮರುದಿನ ರಾಮಪ್ಪ ಅವರ ಶವ ನದಿ ತೀರದಲ್ಲೇ ಪತ್ತೆಯಾಗಿತ್ತು. ಉಳಿದವರ ಪತ್ತೆಗೆ ರಾಷ್ಟ್ರೀಯ ವಿಪತ್ತು ದಳ, ಮುಳುಗುತಜ್ಞರು ಹಲವು ವಾರಗಳು ನಡೆಸಿದ ಪ್ರಯತ್ನ ಫಲಕೊಟ್ಟಿರಲಿಲ್ಲ.

ಘಟನೆ ನಡೆದ ಸ್ಥಳದಿಂದ 6 ಕಿ.ಮೀ. ದೂರದ ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದ ಸ್ಥಳೀಯರಿಗೆ ಮೃತದೇಹ ಸಿಕ್ಕಿದೆ. ಮುಖ, ಕೈಕಾಲುಗಳನ್ನು ಜಲಚರಗಳು ತಿಂದಿವೆ.

ಕೈಯಲ್ಲಿದ್ದ ವಾಚು, ಧರಿಸಿದ್ದ ರೇನ್‌ಕೋಟ್, ಉಡುಪುಗಳ ಸಹಾಯದಿಂದ ಕುಟುಂಬದ ಸದಸ್ಯರು ಮೃತರನ್ನು ಪತ್ತೆಹಚ್ಚಿದ್ದಾರೆ. ಅಂದೇ ನೀರು ಪಾಲಾಗಿದ್ದ ಚೋರಡಿ ಸಮೀಪದ ಸನ್ನಿವಾಸದ ಹರೀಶ್ ಇನ್ನೂ ಪತ್ತೆಯಾಗಿಲ್ಲ. 

 

ಪ್ರತಿಕ್ರಿಯಿಸಿ (+)