ಕೃಷಿ ಹೊಂಡಕ್ಕೆ ಬಿದ್ದು ವ್ಯಕ್ತಿ ಸಾವು

3

ಕೃಷಿ ಹೊಂಡಕ್ಕೆ ಬಿದ್ದು ವ್ಯಕ್ತಿ ಸಾವು

Published:
Updated:

ರಾಮನಗರ: ತಾಲ್ಲೂಕಿನ ಚಿಕ್ಕಸೂಲಿಕೆರೆ ಗ್ರಾಮದಲ್ಲಿ ಬುಧವಾರ ಸಂಜೆ ಕೃಷಿ ಹೊಂಡಕ್ಕೆ ಬಿದ್ದು ರೈತ ಶಿವರಾಜು (28) ಮೃತಪಟ್ಟಿದ್ದಾರೆ.

ಶಿವರಾಜು ಕೃಷಿ ಹೊಂಡದ ಪಕ್ಕ ಹುಲ್ಲು ಕುಯ್ಯುತ್ತಿದ್ದ ವೇಳೆ ಕಾಲು ಜಾರಿ ಹೊಂಡಕ್ಕೆ ಬಿದ್ದಿದ್ದಾರೆ. ಇತ್ತೀಚೆಗೆ ಸುರಿದ ಮಳೆಯಿಂದ ಕೃಷಿ ಹೊಂಡದಲ್ಲಿ ನೀರು ತುಂಬಿತ್ತು. ಈಜು ಬಾರದ ಕಾರಣ ಮುಳುಗಿ ಸಾವನ್ನಪ್ಪಿದ್ದಾರೆ.

ರಾತ್ರಿಯಾದರೂ ಶಿವರಾಜು ಮನೆಗೆ ಬಾರದ್ದರಿಂದ ಗಾಬರಿಗೊಂಡ ಕುಟುಂಸ್ಥರು ಹುಡುಕಾಟ ನಡೆಸಿದ್ದರು. ಸಂಬಂಧಿಕರ ಮನೆಗೆ ತೆರಳಿರಬಹುದೆಂದು ಭಾವಿಸಿ ಸುಮ್ಮನಾಗಿದ್ದರು. ಆದರೆ, ಗುರುವಾರ ಬೆಳಗ್ಗೆ ಅವರ ತಂದೆ ಜಮೀನಿಗೆ ತೆರಳಿದಾಗ ಶಿವರಾಜು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.

ಪೊಲೀಸರು ಮೃತದೇಹವನ್ನು ಹೊರತೆಗೆದು, ಜಿಲ್ಲಾಸ್ಪತ್ರೆಯಲ್ಲಿ ಶವಪರೀಕ್ಷೆ ನಡೆಸಿದ ನಂತರ ಶವವನ್ನು ವಾರಸುದಾರರಿಗೆ ಒಪ್ಪಿಸಿದರು. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !