ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೀರ್ ಅಜೀಜ್ ಅಹಮದ್ ನಿಧನ

Last Updated 1 ಡಿಸೆಂಬರ್ 2018, 9:56 IST
ಅಕ್ಷರ ಗಾತ್ರ

ಶಿವಮೊಗ್ಗ: ಕಾಂಗ್ರೆಸ್‌ ಹಿರಿಯ ಮುಖಂಡ, ಮಾಜಿ ವಿಧಾನ ಪರಿಷತ್ ಸದಸ್ಯ ಮೀರ್‌ಅಜೀಜ್ ಅಹಮದ್ (86) ಶುಕ್ರವಾರ ಬೆಳಿಗ್ಗೆ 4.30ಕ್ಕೆ ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ನಿಧನರಾದರು.

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ, ವಕ್ಫ್ ಬೋರ್ಡ್‌ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ 2003ರಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಚ್.ಎಸ್. ಶಾಂತವೀರಪ್ಪ ಗೌಡ ವಿರುದ್ಧ ಗೆಲುವು ಸಾಧಿಸಿದ್ದರು.

ಸಾರಿಗೆ ಸಂಸ್ಥೆಯ ಮಾಲೀಕರಾಗಿಯೂ ಯಶಸ್ವಿಯಾಗಿದ್ದರು. ಅವರಿಗೆ ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ.

ಕಾಂಗ್ರೆಸ್ ಜಿಲ್ಲಾ ಘಟಕ ಸಂತಾಪ:

ಕಾಂಗ್ರೆಸ್ ಕಚೇರಿಯಲ್ಲಿ ಮೃತರ ನಿಧನಕ್ಕೆ ಸಂತಾಪ ಸೂಚಿಸಲಾಯಿತು. ಅಧ್ಯಕ್ಷ ತೀ.ನಾ. ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್, ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಮತ್ತಿತರರು ಮೃತರ ಆತ್ಮಕ್ಕೆ ಶಾಂತಿ ಕೋರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT