ಸೋಮವಾರ, ಫೆಬ್ರವರಿ 17, 2020
15 °C

ಜಿ.ಮಾದಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ಹಿರಿಯ ಸಮಾಜವಾದಿ, ವಿಧಾನ ಪರಿಷತ್ ಮಾಜಿ ಸದಸ್ಯ ಜಿ.ಮಾದಪ್ಪ (90) ಬುಧವಾರ ನಿಧನರಾದರು.

ಶಿವಮೊಗ್ಗದ ಗಾಂಧಿನಗರದ ಮನೆಯಲ್ಲಿ ಮಧ್ಯಾಹ್ನ 2ರಿಂದ ಗುರುವಾರ ಬೆಳಿಗ್ಗೆ 10ರವರೆಗೆ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಮಧ್ಯಾಹ್ನ 2ಕ್ಕೆ ಅವರ ಹಟ್ಟೂರು ಹೊನ್ನಾಳಿ ತಾಲ್ಲೂಕು ಯರೇಹಳ್ಳಿಯಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಸರಳ ವ್ಯಕ್ತಿತ್ವ, ಗಾಂಧಿ ಅನುಯಾಯಿ ಮಾದಪ್ಪ ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಎಚ್.ಪಟೇಲರ ಒಡನಾಡಿ. ಪಟೇಲ್‌ ನಿಧನದ ನಂತರ ಜೆಡಿಎಸ್ ಸೇರಿದ್ದರು. ಎರಡು ಅವಧಿ ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಸ್ಪರ್ಧಿಸಿ ವಿಧಾನ ಪರಿಷತ್‌  ಪ್ರವೇಶಿಸಿದ್ದರು. ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿದ್ದ ಅವರು ಹಲವು ಜನಪರ ಹೋರಾಟಗಳನ್ನು ರೂಪಿಸಿದ್ದರು. ಪ್ರಸ್ತುತ ದಿನಗಳವರೆಗೂ ಶಿವಮೊಗ್ಗ ಖಾದಿ ಭಂಡಾರದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವರಿಗೆ ಇಬ್ಬರು ಪುತ್ರಿಯರು, ಒಬ್ಬ ಪುತ್ರ ಇದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)