ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಳೆಹೊನ್ನೂರು ಕ್ಷೇತ್ರದ ಮಾಜಿ ಶಾಸಕ ಎಸ್. ಕರಿಯಣ್ಣ ವಿಧಿವಶ

Last Updated 14 ಡಿಸೆಂಬರ್ 2018, 14:48 IST
ಅಕ್ಷರ ಗಾತ್ರ

ಶಿವಮೊಗ್ಗ: ಹೊಳೆಹೊನ್ನೂರು ಕ್ಷೇತ್ರದ ಮಾಜಿ ಶಾಸಕ ಎಸ್. ಕರಿಯಣ್ಣ ಶುಕ್ರವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

1989 ಹಾಗೂ 1999ರಲ್ಲಿ ಪರಿಶಿಷ್ಟಜಾತಿ ಮೀಸಲು ವಿಧಾನಸಭಾ ಕ್ಷೇತ್ರ ಹೊಳೆಹೊನ್ನೂರಿನಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಆಯ್ಕೆಯಾಗಿದ್ದರು.

ಶಿವಮೊಗ್ಗ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ಕೋಟೆ ಶ್ರೀಮಾರಿಕಾಂಬ ದೇವಾಲಯ ಸಮಿತಿ ಉಪಾಧ್ಯಕ್ಷ,ಶಿವಮೊಗ್ಗ ಸಿಟಿ ಕೋ-ಆಪರೇಟಿವ್ ಬ್ಯಾಂಕ್, ಶಿವಮೊಗ್ಗ ಹೌಸಿಂಗ್ ಕೋ-ಆಪರೇಟಿವ್ ಸೊಸೈಟಿ, ರವೀಂದ್ರ ನಗರದ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನ ಸಮಿತಿ ಅಧ್ಯಕ್ಷರಾಗಿಯೂ ಕರಿಯಣ್ಣ ಸೇವೆ ಸಲ್ಲಿಸಿದ್ದರು. ಪಕ್ಷದ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದರು.

ಅವರಿಗೆ ಪತ್ನಿ, ಇಬ್ಬರು ಪುತ್ರಿಯರು, ಇಬ್ಬರು ಪುತ್ರರು ಇದ್ದಾರೆ. ಕರಿಯಣ್ಣ ಅವರ ಪಾರ್ಥಿವ ಶರೀರ ಶುಕ್ರವಾರ ಸಂಜೆ ವಿನೋಬ ನಗರದ ಅವರ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆಇಡಲಾಗಿತ್ತು.

ಶನಿವಾರ ಬೆಳಿಗ್ಗೆ ಬಿ. ಬೀರನಹಳ್ಳಿಯಲ್ಲಿರುವ ಅವರ ತೋಟದಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಸಂತಾಪ: ಎಸ್. ಕರಿಯಣ್ಣನವರ ನಿಧನಕ್ಕೆ ಕೋಟೆ ಶ್ರೀ ಮಾರಿಕಾಂಬ ದೇವಸ್ಥಾನ ಸಮಿತಿ ಅಧ್ಯಕ್ಷ ಎಸ್.ಕೆ. ಮರಿಯಪ್ಪ, ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್, ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್, ವಿಧಾನ ಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್, ಕಾಂಗ್ರೆಸ್ ಜಿಲ್ಲಾ ಘಟಕದ ಅದ್ಯಕ್ಷ ತೀ.ನಾ. ಶ್ರೀನಿವಾಸ್ ಸಂತಾಪ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT