ಧರಣಿ ಆತ್ಯಹತ್ಯೆ: ಆರೋಪಿಗಳ ಪರ ವಕಾಲತ್ತು ವಹಿಸದಿರಿ

7

ಧರಣಿ ಆತ್ಯಹತ್ಯೆ: ಆರೋಪಿಗಳ ಪರ ವಕಾಲತ್ತು ವಹಿಸದಿರಿ

Published:
Updated:
Prajavani

ಕನಕಪುರ: ವಕೀಲರಾದ ಎಸ್‌.ಧರಣಿ ಅವರ ಆತ್ಮಹತ್ಯೆಗೆ ಕಾರಣರಾದ ಎಲ್ಲಾ ಆರೋಪಿಗಳನ್ನು ಬಂಧಿಸಿ ಸೂಕ್ತ ಕ್ರಮ ಜರುಗಿಸಬೇಕೆಂದು ವಕೀಲರ ಸಂಘದ ಅಧ್ಯಕ್ಷ ಗಿರಿಧರ ಕೆ.ಎಸ್‌.ಒತ್ತಾಯಿಸಿದರು.

ನಗರ ನ್ಯಾಯಾಲಯದ ವಕೀಲರ ಸಂಘದ ಕಚೇರಿಯಲ್ಲಿ ನಡೆದ ವಿಶೇಷ ಸಭೆಯಲ್ಲಿ ಮಾತನಾಡಿದರು.

ಧರಣಿ ಅವರು ಪೊಲೀಸ್‌ ಠಾಣೆಯಲ್ಲಿ ದೂರು ನೀಡಲು ಹೋದಾಗ ಅಲ್ಲಿನ ಠಾಣಾಧಿಕಾರಿ ದೂರು ಸ್ವೀಕರಿಸದೆ ಕರ್ತವ್ಯ ಲೋಪ ಎಸಗಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ನಗರ ಪೊಲೀಸ್‌ ಆಯುಕ್ತರ ಮೇಲೆ ರಾಮನಗರ ಎಸ್‌ಪಿ ಮೂಲಕ ಒತ್ತಾಯಿಸಬೇಕು ಎಂದು ತಿಳಿಸಿದರು.

ಸಂಘದ ಪ್ರಧಾನ ಕಾರ್ಯದರ್ಶಿ ದೇವುರಾವ್‌ ಜಾಧವ್‌ ಮಾತನಾಡಿ, ಸಹೋದ್ಯೋಗಿ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣರಾದ ಆರೋಪಿಗಳ ಪರವಾಗಿ ನ್ಯಾಯಾಲಯದಲ್ಲಿ ಸಂಘದ ಯಾವುದೇ ವಕೀಲ ಸದಸ್ಯರು ವಕಾಲತ್ತು ವಹಿಸಬಾರದು ಎಂದು ಮನವಿ ಮಾಡಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !