‘ಸಾಲಮನ್ನಾ: ಕೊಟ್ಟ ಮಾತಿಗೆ ತಪ್ಪುವುದಿಲ್ಲ‌’

5

‘ಸಾಲಮನ್ನಾ: ಕೊಟ್ಟ ಮಾತಿಗೆ ತಪ್ಪುವುದಿಲ್ಲ‌’

Published:
Updated:
ಚನ್ನಪಟ್ಟಣದಲ್ಲಿ ನಡೆದ ಶಾಸಕರ ಕಚೇರಿ ಉದ್ಘಾಟನೆ ಸಮಾರಂಭದಲ್ಲಿ ಜೆಡಿಎಸ್ ನಾಯಕಿ ಅನಿತಾ ಕುಮಾರಸ್ವಾಮಿ ಮಾತನಾಡಿದರು

ಚನ್ನಪಟ್ಟಣ: ರೈತರ ಸಾಲಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ನೀಡಿರುವ ಮಾತಿಗೆ ತಪ್ಪುವುದಿಲ್ಲ ಎಂದು ಜೆಡಿಎಸ್‌ ನಾಯಕಿ ಅನಿತಾ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಗುರುವಾರ ಶಾಸಕರ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ಸಾಲಮನ್ನಾ ವಿಚಾರದಲ್ಲಿ ಯಾರೂ ಗೊಂದಲಕ್ಕೆ ಒಳಗಾಗುವುದು ಬೇಡ ಎಂದರು.

ಸಾಲಮನ್ನಾ ವಿಚಾರವಾಗಿ ಪ್ರತಿದಿನ ಎಲ್ಲ ಇಲಾಖೆಗಳ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಭೆ ನಡೆಸುತ್ತಿದ್ದಾರೆ. ಸಂಪನ್ಮೂಲ ಕ್ರೋಡೀಕರಣ ಮಾಡುವ ವಿಚಾರದ ಸಲಹೆ ಪಡೆಯುತ್ತಿದ್ದಾರೆ. ಸುಳ್ಳು ಸುದ್ದಿಗೆ ರೈತರು ಕಿವಿಗೊಡಬಾರದು ಎಂದು ತಿಳಿಸಿದರು.

ತಾಲ್ಲೂಕಿನ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಕಾಮಗಾರಿಗಳ ಬಗ್ಗೆ ಪಟ್ಟಿ ಮಾಡಲಾಗುತ್ತಿದೆ. ಶೀಘ್ರವೇ ಮುಖ್ಯಮಂತ್ರಿ ತಾಲ್ಲೂಕಿಗೆ ಭೇಟಿ ನೀಡಿ ಇಲ್ಲಿನ ಸಮಸ್ಯೆಗಳಿಗೆ ಸ್ಪಂದಿಸಲಿದ್ದಾರೆ. ಬಜೆಟ್‌ ಪೂರ್ವಭಾವಿ ತಯಾರಿ ಒತ್ತಡದಿಂದ ಕ್ಷೇತ್ರಕ್ಕೆ ಭೇಟಿ ನೀಡಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದರು.

ಜನರ ಸಮಸ್ಯೆಗಳಿಗೆ ಸ್ಪಂದಿಸಲು ಪಟ್ಟಣದಲ್ಲಿ ಶಾಸಕರ ಕಚೇರಿ ತೆರೆದು ಮುಖ್ಯಮಂತ್ರಿ ವಿಶೇಷಾಧಿಕಾರಿ ನೇಮಿಸಲಾಗಿದೆ. ವಾರದಲ್ಲಿ ಮೂರು ದಿನ ಅವರು ಕಚೇರಿಯಲ್ಲಿ ಲಭ್ಯವಿರುತ್ತಾರೆ ಎಂದು ಮಾಹಿತಿ ನೀಡಿದರು.

ಹಿರಿಯ ಮುಖಂಡ ಸಿಂ.ಲಿಂ.ನಾಗರಾಜು, ಬಮೂಲ್ ನಿರ್ದೇಶಕ ಎಸ್.ಲಿಂಗೇಶ್ ಕುಮಾರ್, ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ಜಯಮುತ್ತು, ನಗರ ಘಟಕದ ಅಧ್ಯಕ್ಷ ರಾಂಪುರ ರಾಜಣ್ಣ, ಮುಖ್ಯಮಂತ್ರಿಗಳ ವಿಶೇಷಾಧಿಕಾರಿ ಕೃಷ್ಣಪ್ಪ, ಮುಖಂಡ ಸಿಂಗರಾಜಪುರ ರಾಜಣ್ಣ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !