ಶುಕ್ರವಾರ, ಜನವರಿ 17, 2020
17 °C

ಶಿವಮೊಗ್ಗ: ಪೌರತ್ವ ಹೋರಾಟಗಾರರ ಬಿಡುಗಡೆಗೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಚಂದ್ರಶೇಖರ್ ಅಜಾದ್ ರಾವಣ್ ಅವರನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಶಿವಮೊಗ್ಗ ಪೀಸ್ ಆರ್ಗನೈಜೇಷನ್ ಮಹಿಳಾ ವಿಭಾಗದ ಸದಸ್ಯರು ಒತ್ತಾಯಿಸಿದರು.

ಕೇಂದ್ರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಎಲ್ಲೆಡೆ ಪ್ರತಿಭಟನೆಗಳು ನಡೆಯುತ್ತಿವೆ. ಡಿ.21 ರಂದು ದೆಹಲಿಯ ಜಾಮಿಯಾ ಮಸೀದಿಯಲ್ಲಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಭೀಮಸೇನ ಮುಖ್ಯಸ್ಥ ಚಂದ್ರಶೇಖರ್ ಅಜಾದ್ ರಾವಣ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇದು ಸಂವಿಧಾನದ ಹಕ್ಕುಗಳ ಉಲ್ಲಂಘನೆ ಎಂದು ಸಂಘಟನೆಯ ಮುಖಂಡರಾದ ಎಹಸಾಸ್ ನಯಾಬ್, ನಾಜೀಮಾ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ನಡೆಸುವಾಗ ಬಂಧಿಸಿದ ಎಲ್ಲ ಭಾರತೀಯರನ್ನೂ ಬಿಡುಗಡೆ ಮಾಡಬೇಕು. ಅವರ ವಿರುದ್ಧ ದಾಖಲಾದ ಪ್ರಕರಣಗಳನ್ನು ವಾಪಸ್ ಪಡೆಯಬೇಕು. ರಾಷ್ಟ್ರಪತಿಗಳು ಮಧ್ಯಪ್ರವೇಶಿಸಬೇಕು ಎಂದು ಮನವಿ ಮಾಡಿದರು. 

ಪೌರತ್ವ ತಿದ್ದುಪಡಿ ಕಾಯ್ದೆ ಜಾತಿ ಮತ್ತು ಧರ್ಮದ ಆಧಾರದ ಮೇಲೆ ರಚಿಸಲಾಗಿದೆ. ಅಲ್ಪಸಂಖ್ಯಾತರನ್ನು ದೇಶದಿಂದ ಒಕ್ಕಲೆಬ್ಬಿಸುವ ಹುನ್ನಾರ ಅಡಗಿದೆ. ಈ ಕಾಯ್ದೆಯನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಘಟನೆಯ ಸಲ್ಮಾ ಯಾಸ್ಮೀನ್ ಮತ್ತಿತರರು ಇದ್ದರು.

ಪ್ರತಿಕ್ರಿಯಿಸಿ (+)