ಹುಬ್ಬಳ್ಳಿ: ‘ಸಿಆರ್ಎಫ್ ಯೋಜನೆಯಡಿ ಜಿಲ್ಲೆಯ ರಸ್ತೆಗಳ ಅಭಿವೃದ್ಧಿಗಾಗಿ ₹110ಕೋಟಿ ಅನುದಾನ ಬಿಡುಗಡೆಯಾಗಿದೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.

‘ಕೇಂದ್ರ ರಸ್ತೆ ಮತ್ತು ಮೂಲಸೌಕರ್ಯ ನಿಧಿಯಡಿ ಹೆಚ್ಚುವರಿಯಾಗಿ ಶಿಗ್ಗಾಂವ ತಾಲ್ಲೂಕಿನ ತಡಸ ಕ್ರಾಸ್ನಿಂದ ಕಲಘಟಗಿ ಪಟ್ಟಣದ 25 ಕಿಮೀ., ರಸ್ತೆ ಅಭಿವೃದ್ಧಿಗೆ ₹50 ಕೋಟಿ. ಧಾರವಾಡ ನಗರದ ನುಗ್ಗಿಕೇರಿಯಿಂದ ಕಲಘಟಗಿ ತಾಲ್ಲೂಕಿನ ದಾಸ್ತಿಕೊಪ್ಪದವರೆಗಿನ 28 ಕಿಮೀ., ರಸ್ತೆ ಅಭಿವೃದ್ಧಿಗೆ ₹60ಕೋಟಿ ಅನುದಾನವನ್ನು ಕೇಂದ್ರ ಹೆದ್ದಾರಿ ಮತ್ತು ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಬಿಡುಗಡೆ ಮಾಡಿದ್ದಾರೆ’ ಎಂದು ತಿಳಿಸಿದ್ದಾರೆ.

‘ರಾಜ್ಯದಲ್ಲಿ ಸಾರಿಗೆ ಕ್ಷೇತ್ರದಲ್ಲಿ ಅಭಿವೃದ್ಧಿ ಕ್ರಾಂತಿಯೇ ಆಗುತ್ತಿದೆ. ಈ ಯೋಜನೆಯು ರಾಜ್ಯದಲ್ಲಿ ಮೂಲಸೌಲಭ್ಯವನ್ನು ಕಲ್ಪಿಸುತ್ತಿದೆ. ಅಲ್ಲದೆ, ಸಂಪರ್ಕವನ್ನು ಹೆಚ್ಚಿಸುವ ಮೂಲಕ ಆರ್ಥಿಕ ಅಭಿವೃದ್ಧಿ ಹೆಚ್ಚಳಕ್ಕೆ ಕಾರಣವಾಗಲಿದೆ’ ಎಂದು ಸಚಿವ ಜೋಶಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.