ಹುಬ್ಬಳ್ಳಿ: ಟಿಂಬರ್ ವ್ಯಾಪಾರಿಯೊಬ್ಬರು ತಮ್ಮ ಕಾರಿನಲ್ಲಿ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ ₹15 ಲಕ್ಷ ನಗದನ್ನು ನಗರದ ಕಾರವಾರ ರಸ್ತೆಯ ಚೆಕ್ ಪೋಸ್ಟ್‌ನಲ್ಲಿ ಕರ್ತವ್ಯ ನಿರತ ಚುನಾವಣಾ ಸಿಬ್ಬಂದಿ ಭಾನುವಾರ ವಶಪಡಿಸಿಕೊಂಡಿದ್ದಾರೆ.

ಅಂಕೋಲಾ ಕಡೆಯಿಂದ ಹುಬ್ಬಳ್ಳಿಗೆ ಬರುತ್ತಿದ್ದ ಬ್ರೇಜಾ ಕಾರನ್ನು ತಡೆದ ಸಿಬ್ಬಂದಿ, ಒಳಗೆ ಪರಿಶೀಲಿಸುತ್ತಿದ್ದಾಗ ಹಣ ಪತ್ತೆಯಾಗಿದೆ. ದಾಖಲೆ ಕೇಳಿದಾಗ ವ್ಯಕ್ತಿ ನೀಡಿಲ್ಲ. ತಕ್ಷಣ ಸಿಬ್ಬಂದಿ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಬಂದ ಎಸಿಪಿ ಆರ್.ಕೆ. ಪಾಟೀಲ ಹಾಗೂ ಹುಬ್ಬಳ್ಳಿ ನಗರ ತಹಶೀಲ್ದಾರ್ ಆರ್.ಕೆ. ಪಾಟೀಲ ಅವರು, ವ್ಯಕ್ತಿಯನ್ನು ವಿಚಾರಿಸಿದ್ದಾರೆ. ನಂತರ, ಕಾರು ಸಮೇತ ವ್ಯಾಪಾರಿಯನ್ನು ಹಳೇ ಹುಬ್ಬಳ್ಳಿ ಠಾಣೆಗೆ ಕರೆದೊಯ್ದರು.

‘ಮರದ ವ್ಯವಹಾರಕ್ಕೆ ಸಂಬಂಧಿಸಿದ ಹಣ ಎಂದು ವ್ಯಾಪಾರಿ ವಿಚಾರಣೆ ವೇಳೆ ತಿಳಿಸಿದ್ದಾರೆ. ಈ ಕುರಿತು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಅವರು ಬಂದು ವಿಚಾರಣೆ ನಡೆಸಲಿದ್ದಾರೆ’ ಎಂದು ತಹಶೀಲ್ದಾರ್ ಆರ್.ಕೆ. ಪಾಟೀಲ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.