ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧಾರವಾಡ: 1-8ನೇ ತರಗತಿ ನಾಳೆಯಿಂದ ಆರಂಭ- ಜಿಲ್ಲಾಧಿಕಾರಿಯಿಂದ ಪರಿಷ್ಕೃತ ಆದೇಶ

Last Updated 22 ಜನವರಿ 2022, 16:40 IST
ಅಕ್ಷರ ಗಾತ್ರ

ಧಾರವಾಡ: ಧಾರವಾಡ ಮತ್ತು ಹುಬ್ಬಳ್ಳಿಯ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿನ ಶಾಲೆಗಳ 1ರಿಂದ 8ನೇ ತರಗತಿಗಳನ್ನು ಪುನರ್ ಆರಂಭಿಸಲು ಜಿಲ್ಲಾಧಿಕಾರಿ ನಿತೇಶ್ ಕೆ. ಪಾಟೀಲ ಶನಿವಾರ ಆದೇಶಿಸಿದ್ದಾರೆ.

ಶಾಲೆಗಳನ್ನು ತೆರೆಯದಂತೆ ಜ. 12ರಂದು ಹೊರಡಿಸಿದ್ದ ಆದೇಶವನ್ನು ಜಿಲ್ಲಾಧಿಕಾರಿ ಹಿಂಪಡೆದಿದ್ದಾರೆ. ಜತೆಗೆ ಪರಿಷ್ಕೃತ ಆದೇಶವನ್ನು ಅವರು ಪ್ರಕಟಿಸಿದ್ದಾರೆ.

ಶಾಲೆ ಹಾಗೂ ಕಾಲೇಜುಗಳಲ್ಲಿ 3ರಿಂದ 5 ಸೋಂಕಿತ ಪ್ರಕರಣಗಳು ಕಂಡುಬಂದಲ್ಲಿ 3ದಿನ, 6ರಿಂದ 20 ಸೋಂಕಿತ ಪ್ರಕರಣಗಳಿಗೆ 5 ದಿನ, 20ಕ್ಕಿಂತ ಹೆಚ್ಚಿನ ಸೋಂಕಿತ ಪ್ರಕರಣಗಳು ಕಂಡುಬಂದರೆ 7 ದಿನ ಅಲ್ಲಿ ಸಾರ್ವತ್ರಿಕ ರಜೆ ಘೋಷಿಸಬೇಕು. ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ, ಪದವಿಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಸಂಬಂಧಿಸಿದ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಮತ್ತು ಪ್ರಾಚಾರ್ಯರಿಗೆ ಸೂಚಿಸಿದ್ದಾರೆ.

‘ಆರೋಗ್ಯ ಇಲಾಖೆಯ ಎಲ್ಲ ಅಧಿಕಾರಿಗಳು ನೋಡಲ್ ಅಧಿಕಾರಿಗಳಿಗೆ ಈ ವಿಷಯದಲ್ಲಿ ಸಂಪೂರ್ಣ ಸಹಕಾರ ನೀಡಬೇಕು. ಕೋವಿಡ್–19 ಸೋಂಕು ನಿಯಂತ್ರಣ ಕುರಿತು ಎಲ್ಲ ಅಧಿಕಾರಿ, ಸಿಬ್ಬಂದಿ ವರ್ಗದವರು ಪರಸ್ಪರ ಸಹಕಾರ, ಸಮನ್ವಯದೊಂದಿಗೆ ತಮಗೆ ವಹಿಸಿದ ಕಾರ್ಯಕ್ರಮವನ್ನು ಜವಾಬ್ದಾರಿಯುತವಾಗಿ ನಿರ್ವಹಿಸಬೇಕು. ಇಲ್ಲವಾದಲ್ಲಿ ಸಾಂಕ್ರಾಮಿಕ ರೋಗ ಕಾಯ್ದೆ ಅಡಿಯಲ್ಲಿ ಶಿಸ್ತು ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಸಿದ್ದಾರೆ.

ಶಾಲಾ, ಕಾಲೇಜು ಮುಖ್ಯಸ್ಥರು ಪಾಲಿಸಬೇಕಾದ ನಿಯಮಗಳು

* ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸುವ ಹಾಗೂ ಪುನರ್ ಆರಂಭಿಸುವ ಕುರಿತು ನಿಯಮಿತವಾಗಿ ಸಕ್ಷಮ ಪ್ರಾಧಿಕಾರಕ್ಕೆ ವರದಿ ಸಲ್ಲಿಸಬೇಕು.

* ರಜೆ ಘೋಷಿಸಿದ ಅವಧಿಯಲ್ಲಿ ಶಾಲಾ, ಕಾಲೇಜು ಆವರಣವನ್ನು ಸ್ಯಾನಿಟೈಸ್ ಮಾಡಬೇಕು.

*ಸೋಂಕಿತ ವಿದ್ಯಾರ್ಥಿಗಳ ಆರೋಗ್ಯದ ಸ್ಥಿತಿಗತಿ ಬಗ್ಗೆ ದಿನಂಪ್ರತಿ ವಿಚಾರಿಸುವುದು ಹಾಗೂ ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು.

* ವಿದ್ಯಾರ್ಥಿಗಳಿಗೆ ಕೋವಿಡ್-19 ಮುನ್ನೆಚ್ಚರಿಕಾ ಕ್ರಮಗಳಾದ ಮಾಸ್ಕ್ ಧರಿಸುವಿಕೆ ಮತ್ತು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಕುರಿತು ತಿಳಿವಳಿಕೆ ನೀಡಬೇಕು.

* ಸರ್ಕಾರದ ಮಾರ್ಗಸೂಚಿಗಳನ್ವಯ ಅರ್ಹ ವಿದ್ಯಾರ್ಥಿಗಳಿಗೆ ಲಸಿಕಾಕರಣ ಕುರಿತು ಕ್ರಮ ಕೈಕೊಳ್ಳಬೇಕು.

* ಸೋಂಕಿತ ವಿದ್ಯಾರ್ಥಿಗಳ ಪ್ರಥಮ ಹಾಗೂ ದ್ವಿತೀಯ ಸಂಪರ್ಕಿತರ ಗಂಟಲು ದ್ರವ ತಪಾಸಣೆ ಕುರಿತು ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಸೂಕ್ತ ಕ್ರಮ ವಹಿಸಬೇಕು.

* ರಜೆ ಅವಧಿಯಲ್ಲಿ ವಿದ್ಯಾರ್ಥಿಗಳಲ್ಲಿ ಕಂಡು ಬರುವ ಪಾಸಿಟಿವ್ ಪ್ರಕರಣಗಳ ಮಾಹಿತಿಯನ್ನು ಪಡೆದು ರಜೆಯನ್ನು ಮುಂದುವರಿಸುವ ಬಗ್ಗೆ ಅಥವಾ ಶಾಲೆಯನ್ನು ಪುನರ್ ಆರಂಭಿಸುವ ಬಗ್ಗೆ ನೋಡಲ್ ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT