ಸೋಮವಾರ, ಜೂನ್ 14, 2021
26 °C

ಸಂಸತ್ ಅಧಿವೇಶನದಲ್ಲಿ 38 ಹೊಸ ಬಿಲ್‌ ಮಂಡಿಸಲು ಸಿದ್ಧತೆ: ಪ್ರಹ್ಲಾದ ಜೋಶಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಈ ಬಾರಿಯ ಸಂಸತ್ ಅಧಿವೇಶನದಲ್ಲಿ 38 ಹೊಸ ಬಿಲ್‌ಗಳನ್ನು ಮಂಡಿಸಲು ಸಿದ್ಧತೆ ನಡೆದಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರ, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಜಮ್ಮು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತ ವಿಸ್ತರಣೆ, ತ್ರಿವಳಿ ತಲಾಖ್ ನಿಷೇಧ ಸೇರಿದಂತೆ ಪ್ರಮುಖ ಮಸೂದೆಗಳಿಗೆ ವಿಪಕ್ಷಗಳ ಸಹಕಾರದೊಂದಿಗೆ ಈ ಅಧಿವೇಶನದಲ್ಲಿ ಅನುಮೋದನೆ ಪಡೆಯಲಾಗುವುದು ಎಂದರು.  

ಸುಗಮ ಕಲಾಪಕ್ಕೆ ಸಹಕರಿಸುವಂತೆ ಕೋರಿ ಈಗಾಗಲೇ ಎಲ್ಲ ವಿಪಕ್ಷಗಳ ಮುಖಂಡರನ್ನು ಭೇಟಿ ಮಾಡಿ ಸಹಕಾರ ಕೋರಲಾಗಿದೆ ಎಂದರು.

ಜಿಂದಾಲ್‌ಗೆ ಭೂಮಿ: ಭ್ರಷ್ಟಾಚಾರದ ವಾಸನೆ

ಜಿಂದಲ್‌ಗೆ ಭೂಮಿ ನೀಡುವ ವಿಷಯದಲ್ಲಿ ಸಮ್ಮಿಶ್ರ ಸರ್ಕಾರದಲ್ಲಿ ಭಿನ್ನಾಭಿಪ್ರಾಯ ಇದೆ. ಇದರಲ್ಲಿ ಭ್ರಷ್ಟಾಚಾರದ ವಾಸನೆ ಇದ್ದು, ಈ ಬಗ್ಗೆ ಸಮಗ್ರ ತನಿಖೆ ಆಗಬೇಕು ಎಂದು ಒತ್ತಾಯಿಸಿದರು. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸ್ಥಗಿತವಾಗಿವೆ, ಸರ್ಕಾರ ಇಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು