ಹುಬ್ಬಳ್ಳಿ: ಇಲ್ಲಿ ನಡೆದ ಇನ್ವೆಸ್ಟ್ ಕರ್ನಾಟಕ ಸಮ್ಮೇಳನದಲ್ಲಿ ಆದ ಒಪ್ಪಂದದಂತೆ ಪ್ರತಿಷ್ಠಿತ ಕಂಪನಿಗಳು ಹುಬ್ಬಳ್ಳಿ ನಗರ ಸೇರಿದಂತೆ ಧಾರವಾಡ ಜಿಲ್ಲೆಯ ಹಲವು ಭಾಗದಲ್ಲಿ 6 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡಲಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

ಮಹಾನಗರ ಪಾಲಿಕೆ ಅನುದಾನದಲ್ಲಿ ಉದಯನಗರದ ಶಿವ ಗಣೇಶ ದೇವಸ್ಥಾನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಸಭಾ ಭವನ ಉದ್ಘಾಟಿಸಿ ಅವರು ಮಾತನಾಡಿದರು.

ಬಂಡವಾಳ ಹೂಡಿಕೆಯಿಂದ ಐಟಿ, ಮೆಕಾನಿಕಲ್ ಎಂಜಿನಿಯರಿಂಗ್, ಎಫ್ಎಂಜಿಸಿ ಸೇರಿ ಹಲವು ವಿಭಾಗಗಳಲ್ಲಿ ಉದ್ಯೋಗ ಅವಕಾಶಗಳು ದೊರೆಯಲಿವೆ. ಜಿಲ್ಲೆಯ 20 ರಿಂದ 30 ಸಾವಿರ ಯುವಕರಿಗೆ ಸ್ಥಳೀಯವಾಗಿ ಉದ್ಯೋಗ ದೊರಕಲಿದೆ. ಯುವಜನತೆ ಉದ್ಯೋಗ ಅರಸಿ ಬೆಂಗಳೂರು ಸೇರಿದಂತೆ ವಿವಿಧ ನಗರಗಳಿಗೆ ವಲಸೆ ಹೋಗುವುದು ತಪ್ಪಲಿದೆ ಎಂದರು.

ಅವಳಿ ನಗರದಲ್ಲಿ ನಗರ ವಿಕಾಸ, ಸ್ಮಾರ್ಟ್ ಸಿಟಿ. ಲೋಕೋಪಯೋಗಿ ಸೇರಿದಂತೆ ಸಾವಿರಾರು ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿವೆ. ಅವಳಿ ನಗರವನ್ನು ಸುಂದರ ಹಾಗೂ ಸುಸ್ಥಿರ ನಗರವನ್ನಾಗಿ ಮಾರ್ಪಡಿಸಲಾಗುವುದು. ನಗರದ ಪ್ರತಿಯೊಂದು ಬಡಾವಣೆಯ ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗುತ್ತದೆ. ಸ್ಮಾರ್ಟ್ ಸಿಟಿ ಯೋಜನೆ ಅನುಷ್ಠಾನದಲ್ಲಿ ಹುಬ್ಬಳ್ಳಿ ಧಾರವಾಡ ರಾಜ್ಯಕ್ಕೆ ಪ್ರಥಮ ಸ್ಥಾನದಲ್ಲಿದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.