ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿ: ಶೇ 65ರಷ್ಟು ಆದಾಯ ಹೆಚ್ಚಳ: ಕಿಶೋರ್

ನೈಋತ್ಯ ರೈಲ್ವೆಯ ಕೇಂದ್ರ ಕಚೇರಿಯಲ್ಲಿ ಧ್ವಜಾರೋಹಣ
Last Updated 27 ಜನವರಿ 2022, 6:54 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಕೋವಿಡ್‌ ಸವಾಲಿನ ನಡುವೆಯೂ ಹಿಂದಿನ ಆರ್ಥಿಕ ವರ್ಷಕ್ಕಿಂತ ಈ ಬಾರಿ ಶೇ 65ರಷ್ಟು ಆದಾಯ ಹೆಚ್ಚಳವಾಗಿದೆ ಎಂದು ನೈರುತ್ಯ ರೈಲ್ವೆ ವಲಯದ ಪ್ರಧಾನ ವ್ಯವಸ್ಥಾಪಕ ಸಂಜೀವ ಕಿಶೋರ್ ಹೇಳಿದರು.

ರೈಲ್‌ ಸೌಧದಲ್ಲಿ ಬುಧವಾರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ‘ಪ್ರಸಕ್ತ ಹಣಕಾಸು ವರ್ಷದಲ್ಲಿ ₹4,385 ಕೋಟಿ ಆದಾಯ ಲಭಿಸಿದೆ. ಜೊತೆಗೆ ಡಿಸೆಂಬರ್ 21ರ ವರೆಗೆ 31.64 ಟನ್ ನಷ್ಟು ಸರಕು ಸಾಗಿಸಲಾಗಿದೆ. ಇದು ಕಳೆದ ವರ್ಷಕ್ಕಿಂತಲೂ ಶೇ 50ರಷ್ಟು ಹೆಚ್ಚು’ ಎಂದರು.

ನೈರುತ್ಯ ರೈಲ್ವೆ ಹೆಚ್ಚುವರಿ ಪ್ರಧಾನ ವ್ಯವಸ್ಥಾಪಕ ಪ್ರಶಾಂತ್ ಕುಮಾರ್ ಮಿಶ್ರಾ, ಹುಬ್ಬಳ್ಳಿ ವಿಭಾಗೀಯ ವ್ಯವಸ್ಥಾಪಕ ಅರವಿಂದ ಮಾಳಖೇಡೆ, ಪ್ರಧಾನ ಮುಖ್ಯ ಭದ್ರತಾ ಆಯುಕ್ತ ಅಲೋಕ್‌ ಕುಮಾರ್ ಪಾಲ್ಗೊಂಡಿದ್ದರು.

ನೈರುತ್ಯ ರೈಲ್ವೆಯ ಮಹಿಳಾ ಕಲ್ಯಾಣ ಸಂಸ್ಥೆ ಅಧ್ಯಕ್ಷೆ ಡಾ. ವಂದನಾ ಶ್ರೀವಾಸ್ತವ್, ರೈಲ್ವೆ ಹೈಸ್ಕೂಲ್ ಪ್ರೌಢಶಾಲೆಯಲ್ಲಿ ಧ್ವಜಾರೋಹಣ ಮಾಡಿದರು. ಆಹಾರ ಕಿಟ್‌ಗಳನ್ನು ರೈಲ್‌ ಸೌಧ ಹಾಗೂ ಕಾಲೊನಿಯ ಕಾರ್ಮಿಕರಿಗೆ ವಿತರಿಸಲಾಯಿತು. ಸಂಸ್ಥೆಯ ಉಪಾಧ್ಯಕ್ಷೆ ಭಾರತಿ ಮಿಶ್ರಾ ಇದ್ದರು.

ವಿಭಾಗೀಯ ಕಚೇರಿ: ಹುಬ್ಬಳ್ಳಿ ವಿಭಾಗದಿಂದ ನಡೆದ ಕಾರ್ಯಕ್ರಮದಲ್ಲಿ ವಿಭಾಗೀಯ ವ್ಯವಸ್ಥಾಪಕರಾದ ಅರವಿಂದ ಮಾಳಖೇಡೆ ಧ್ವಜಾರೋಹಣ ಮಾಡಿ ’ನಮ್ಮ ವಿಭಾಗದಲ್ಲಿ ಮೂಲ ಸೌಕರ್ಯ ಮತ್ತು ವೇಗಕ್ಕೆ ಒತ್ತು ಕೊಡಲಾಗುತ್ತಿದೆ’ ಎಂದರು.

ವಿಭಾಗೀಯ ಹೆಚ್ಚುವರಿ ರೈಲ್ವೆ ವ್ಯವಸ್ಥಾಪಕ ಜೋಗೇಂದ್ರ ಯಾದವೇಂದು, ವಿಶ್ವಾಸ್ ಕುಮಾರ್, ವಿಷ್ಣುಗೌಡ, ಜಿತೇಂದ್ರ ಕುಮಾರ್ ಶರ್ಮಾ, ಮೀನಲ್ ಗಾಂಧೆ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.

ಬಿಜೆಪಿ ಕಚೇರಿ: ದೇಶಪಾಂಡೆ ನಗರದ ಬಿಜೆಪಿ ಕಚೇರಿಯಲ್ಲಿ ಶಾಸಕ ಜಗದೀಶ ಶೆಟ್ಟರ್‌ ಧ್ವಜಾರೋಹಣ ನೆರವೇರಿಸಿದರು.

ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಕಪಟಕರ, ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ,ಗ್ರಾಮೀಣ ಘಟಕದ ಅಧ್ಯಕ್ಷ ಬಸವರಾಜ ಕುಂದಗೋಳಮಠ ಮುಖಂಡರಾದ ವೀರಭದ್ರಪ್ಪ ಹಾಲಹರವಿ, ನಾಗೇಶ ಕಲಬುರ್ಗಿ, ವೀರೇಶ ಸಂಗಳದ, ರವಿ ನಾಯಕ, ದತ್ತಮೂರ್ತಿ ಕುಲಕರ್ಣಿ, ಮಹೇಂದ್ರ ಕೌತಾಳ, ಪ್ರಭು ನವಲಗುಂದಮಠ, ಪಾಲಿಕೆ ಸದಸ್ಯರಾದ ಉಮೇಶ ಕೌಜಗೇರಿ, ಸತೀಶ ಶೆಜವಾಡಕರ, ಸಂತೋಷ ಚವ್ಹಾಣ, ಶಿವು ಮೆಣಸಿನಕಾಯಿ ಪಾಲ್ಗೊಂಡಿದ್ದರು.

ಕಾಂಗ್ರೆಸ್ ಕಚೇರಿ: ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಹಾಗೂ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ವತಿಯಿಂದ ಧ್ವಜಾರೋಹಣ ನಡೆಯಿತು.

ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಅಲ್ತಾಫ್‌ ಹುಸೇನ ಹಳ್ಳೂರ, ಗ್ರಾಮೀಣ ಘಟಕದ ಅಧ್ಯಕ್ಷ ಅನಿಲಕುಮಾರ ಪಾಟೀಲ, ಮುಖಂಡರಾದ ಎನ್.ಎಚ್. ಕೋನರಡ್ಡಿ, ಸದಾನಂದ ಡಂಗನವರ, ಶರಣಪ್ಪ ಕೊಟಗಿ, ದೀಪಾ ಗೌರಿ, ಶರೀಫ ಗರಗದ, ಶಾಜಮಾನ್ ಮುಜಾಹಿದ್, ದೊಡ್ಡರಾಮಪ್ಪ ದೊಡ್ಡಮನಿ, ಬಸವರಾಜ್ ಬೆಣಕಲ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT