ಗುರುವಾರ , ನವೆಂಬರ್ 21, 2019
23 °C

‘ಹುಬ್ಬಳ್ಳಿ: ಹೂಡಿಕೆದಾರರ ಸಮಾವೇಶ’

Published:
Updated:

ಹುಬ್ಬಳ್ಳಿ: ‘ಹುಬ್ಬಳ್ಳಿ– ಧಾರವಾಡ ಅವಳಿ ನಗರದ ಅಭಿವೃದ್ಧಿಗೆ ಬಂಡವಾಳ ಆಕರ್ಷಿಸಲು ಸದ್ಯದಲ್ಲೇ ಇಲ್ಲಿ ಹೂಡಿಕೆದಾರರ ಸಮಾವೇಶ ಆಯೋಜಿಸಲಾಗುವುದು’ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಟೈ ವತಿಯಿಂದ ಶನಿವಾರ ನಗರದಲ್ಲಿ ಉದ್ಯಮಿಗಳೊಂದಿಗೆ ಹಮ್ಮಿಕೊಂಡಿದ್ದ ಸಂವಾದದಲ್ಲಿ ಮಾತನಾಡಿದ ಅವರು, ‘ರಾಜ್ಯದ ಬೃಹತ್‌ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌ ಸಹ ಇದೇ ಭಾಗದವರು. ಅವರ ಜತೆ ಚರ್ಚಿಸಿ ಶೀಘ್ರ ಸಮಾವೇಶ ಹಮ್ಮಿಕೊಳ್ಳಲಾಗುವುದು’ ಎಂದು ಹೇಳಿದರು.

 

ಪ್ರತಿಕ್ರಿಯಿಸಿ (+)