ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂತಿಮ ಕಣದಲ್ಲಿ 74 ಅಭ್ಯರ್ಥಿಗಳು

Last Updated 22 ಡಿಸೆಂಬರ್ 2021, 4:27 IST
ಅಕ್ಷರ ಗಾತ್ರ

ಅಣ್ಣಿಗೇರಿ: ಇದೇ 27ರಂದು ನಡೆಯಲಿರುವ ಸ್ಥಳೀಯ ಪುರಸಭೆ ಸಾರ್ವತ್ರಿಕ ಚುನಾವಣೆಯ ಕಣದಲ್ಲಿ ಅಂತಿಮವಾಗಿ 74 ಅಭ್ಯರ್ಥಿಗಳಿದ್ದಾರೆ. ಬೆಜೆಪಿ 23, ಕಾಂಗ್ರೆಸ್ 23, ಜೆಡಿಎಸ್ 11, ಆಮ್ ಆದ್ಮಿ ಪಕ್ಷ 1, ಇತರೆ 14 ಅಭ್ಯಥಿಗಳು ಉಳಿದಿದ್ದಾರೆ.

ಪಟ್ಟಣದಲ್ಲಿ ದಿನದಿಂದ ದಿನಕ್ಕೆ ಚುನಾವಣಾ ಕಾವು ಹೆಚ್ಚಾಗುತ್ತಿದ್ದು, ಎಲ್ಲ ರಾಜಕೀಯ ಪಕ್ಷಗಳು ಮತಬೇಟೆಗೆ ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್‌ ಅಧಿಕಾರದ ಗದ್ದುಗೆ ಮೇಲೆ ಕಣ್ಣಿಟ್ಟರೆ, ಸ್ವತಂತ್ರ್ಯ ಅಭ್ಯರ್ಥಿಗಳು ‘ಕಿಂಗ್‌ ಮೇಕರ್‌’ ಆಗುವ ಕನಸು ಕಾಣುತ್ತಿದ್ದಾರೆ.

4ನೇ ವಾರ್ಡ್‌ಗೆ ಸ್ಪರ್ಧಿಸಿರುವ ಕಾಂಗ್ರೆಸ್‌ನ ಶಿವಶಂಕರ ಕಲ್ಲೂರ ಕಣದಿಂದ ಹಿಂದೆ ಸರಿದಿರುವುದು ಪಕ್ಷದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಹಿಂದಿನ ಅವಧಿಯಲ್ಲಿ ಜೆಡಿಎಸ್ ಪುರಸಭೆಯನ್ನು ತನ್ನ ಸ್ವಾಧೀನಕ್ಕೆ ಪಡೆದುಕೊಂಡಿತ್ತು. ಆದರೆ ಈ ಯಾರಿಗೆ ಚುಕ್ಕಾಣಿ ಎನ್ನುವ ಕುತೂಹಲ ಮನೆ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT