ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧಾರವಾಡ: ಎಂಟು ಒಪಿಡಿ ಚಿಕಿತ್ಸಾ ಕೇಂದ್ರ ಆರಂಭ

ಕೋವಿಡ್ ಪರೀಕ್ಷೆಗಾಗಿ ಶಂಕಿತರು ಹೆಚ್ಚು ಓಡಾಟ ತಪ್ಪಿಸಲು ಕ್ರಮ
Last Updated 20 ಜನವರಿ 2022, 16:52 IST
ಅಕ್ಷರ ಗಾತ್ರ

ಧಾರವಾಡ: ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಜಿಲ್ಲಾಡಳಿತವು ದಿನದ 24 ಗಂಟೆಗಳ ಕಾಲ ಕರ್ತವ್ಯ ನಿರ್ವಹಿಸುವ ಹೊರರೋಗಿ ಚಿಕಿತ್ಸಾ ಕೇಂದ್ರಗಳನ್ನು ಜಿಲ್ಲಾ ಆಸ್ಪತ್ರೆ, ಕಿಮ್ಸ್ ಸೇರಿದಂತೆ ಎಂಟು ಕಡೆ ಆರಂಭಿಸಿದೆ.

ಕೋವಿಡ್ ಸೋಂಕಿತರು ಮತ್ತು ಶಂಕಿತರಿಗೆ ಚಿಕಿತ್ಸೆ ಮತ್ತು ಔಷಧ ನೀಡಲು ದಿನವಿಡೀ ಈ ಎಂಟೂ ಕೇಂದ್ರಗಳು ತೆರೆದಿರಲಿವೆ. ಜಿಲ್ಲಾ ಆಸ್ಪತ್ರೆ, ಹುಬ್ಬಳ್ಳಿಯ ಕಿಮ್ಸ್, ರೈಲ್ವೆ ಆಸ್ಪತ್ರೆ, ಚಿಟಗುಪ್ಪಿ ಹಾಗೂ ಇಎಸ್‌ಐ ಆಸ್ಪತ್ರೆ ಮತ್ತು ಹುಬ್ಬಳ್ಳಿಯ ಅಂಜುಮನ್ ವಿದ್ಯಾರ್ಥಿನಿಲಯ, ಸಂಗೊಳ್ಳಿ ರಾಯಣ್ಣ ನಗರದ ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನ ಹಾಗೂ ಅಂಚಟಗೇರಿಯ ಮೊರಾರ್ಜಿ ದೇಸಾಯಿ ವಸತಿ ನಿಲಯಗಳಲ್ಲಿ ಹೊರರೋಗಿ ಚಿಕಿತ್ಸಾ ಕೇಂದ್ರಗಳು ಕಾರ್ಯಾರಂಭ ಮಾಡಿವೆ.

ಈ ಆಸ್ಪತ್ರೆಗಳೊಂದಿಗೆ ಎಸ್‌ಡಿಎಂ ಖಾಸಗಿ ಆಸ್ಪತ್ರೆಯಲ್ಲೂ 24 ಗಂಟೆಗಳ ಫಿವರ್ ಕ್ಲಿನಿಕ್ ತೆರೆಯಲಾಗಿದೆ. ಅಲ್ಲಿ ಸೋಂಕಿತರ ಗಂಟಲು ಹಾಗೂ ಮೂಗಿನ ದ್ರವದ ಮಾದರಿ ಸಂಗ್ರಹಿಸಿ, ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತದೆ.

‘ಜಿಲ್ಲೆಯ 51 ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಕಲಘಟಗಿ, ಕುಂದಗೋಳ, ನವಲಗುಂದ ತಾಲ್ಲೂಕು ಆಸ್ಪತ್ರೆಗಳು ಹಾಗೂ ರೈಲ್ವೆ ಆಸ್ಪತ್ರೆಗಳಲ್ಲಿ ಮತ್ತು ಎಸ್‌ಡಿಎಂ ಖಾಸಗಿ ಆಸ್ಪತ್ರೆಗಳಲ್ಲಿ ನಿತ್ಯ ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ ಗಂಟಲು ದ್ರವ ಮಾದರಿ ಸಂಗ್ರಹಿಸಲಾಗುವುದು. ಇದರೊಂದಿಗೆ 5 ಸಂಚಾರಿ ವಾಹನಗಳು ಹಾಗೂ ಪ್ರತಿ ತಾಲ್ಲೂಕಿಗೆ ಒಂದು ವಾಹನವನ್ನು ನೀಡಲಾಗಿದೆ’ ಎಂದು ಜಿಲ್ಲಾಧಿಕಾರಿ ನಿತೇಶ್ ಕೆ. ಪಾಟೀಲ ತಿಳಿಸಿದ್ದಾರೆ.

‘ಕೋವಿಡ್ ಲಕ್ಷಣ ಹೊಂದಿರುವ ಮತ್ತು ಲಕ್ಷಣ ಇಲ್ಲದಿರುವ ಸೋಂಕಿತರು ಕೋವಿಡ್ ಮಾರ್ಗಸೂಚಿಗಳನ್ನು ಸರಿಯಾಗಿ ಪಾಲಿಸದೆ ಸಾರ್ವಜನಿಕ ಸ್ಥಳಗಳಲ್ಲಿ ಸಂಚರಿಸುವುದರಿಂದ ಸೋಂಕು ಇತರರಿಗೆ ಹರಡುವ ಮತ್ತು ಹೆಚ್ಚಳವಾಗುವ ಸಾಧ್ಯತೆ ಇರುತ್ತದೆ. ಇಂಥವರು ಪರೀಕ್ಷೆಗಾಗಿ ಹೆಚ್ಚು ಓಡಾಡದಂತೆ ನೋಡಿಕೊಳ್ಳುವ ಉದ್ದೇಶದಿಂದಗಂಟಲು ದ್ರವ ಸಂಗ್ರಹ, ಫಿವರ್ ಕ್ಲಿನಿಕ್ ಹಾಗೂ ಒಪಿಡಿ ಘಟಕಗಳನ್ನು ವಿವಿಧ ಸ್ಥಳಗಳಲ್ಲಿ ವಿಕೇಂದ್ರೀಕರಿಸಿ ಆರಂಭಿಸಲಾಗಿದೆ’ ಎಂದು ತಿಳಿಸಿದರು.

‘ಸಾರ್ವಜನಿಕರು ಇವುಗಳ ಸದುಪಯೋಗ ಪಡೆದುಕೊಳ್ಳುವುದರ ಜತೆಗೆ, ಕೋವಿಡ್ ನಿಯಂತ್ರಣಕ್ಕೆ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಬೇಕು’ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT