ಭಾನುವಾರ, ಫೆಬ್ರವರಿ 23, 2020
19 °C

ಹುಬ್ಬಳ್ಳಿ: ನಡೆಯದ ಬಂದ್‌, ಬೀರದ ಪರಿಣಾಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಬ್ಬಳ್ಳಿ: ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ಕಲ್ಪಿಸುವಂತೆ ಶಿಫಾರಸು ಮಾಡಿರುವ ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ ಕೆಲ ಕನ್ನಡ ಸಂಘಟನೆಗಳ ಒಕ್ಕೂಟ ಗುರುವಾರ ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ಹುಬ್ಬಳ್ಳಿಯಲ್ಲಿ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಲಿಲ್ಲ.

ಬೆಳಿಗ್ಗೆಯಿಂದಲೂ ಸಹಜ ವಾತಾವರಣವಿತ್ತು. ವಾಹನ ಸಂಚಾರ ಕೂಡ ಎಂದಿನಂದಿತ್ತು. ಮಾರುಕಟ್ಟೆ, ಅಂಗಡಿ ಮುಂಗಟ್ಟುಗಳು ಸಹ ತೆರೆದಿದ್ದವು. ಶಾಲಾ, ಕಾಲೇಜುಗಳು ನಡೆದವು.

ಕರ್ನಾಟಕ ಸಂಗ್ರಾಮ ಸೇನೆ ಹಾಗೂ ಮಾನವ ಹಕ್ಕುಗಳ ಸಂರಕ್ಷಣಾ ಫೋರಂ ಸಂಘಟನೆಗಳು ಸರೋಜಿನಿ ಮಹಿಷಿ ವರದಿ ಜಾರಿ ಮಾಡಬೇಕು ಎಂದು ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಘೋಷಣೆ ಕೂಗಿ ತಹಶೀಲ್ದಾರ್‌ ಕಚೇರಿಯ ಅಧಿಕಾರಿಗೆ ಮನವಿ ಸಲ್ಲಿಸಿದರು. ತಳ್ಳುವ ಗಾಡಿ ಹಿಡಿದು ವರದಿ ಜಾರಿ ಮಾಡಿ ಕನ್ನಡಿಗರಿಗೆ ನ್ಯಾಯ ಒದಗಿಸಿಕೊಡಬೇಕು. ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸಬೇಕು ಎಂದು ಆಗ್ರಹಿಸಿದರು.

ವಿವಿಧ ಕನ್ನಡ ಪರ ಸಂಘಟನೆಗಳ ಮುಖಂಡರಾದ ಈರಪ್ಪ ಎಮ್ಮಿ, ಸಂಜೀವ ಧುಮ್ಮಕನಾಳ, ರವಿ ಕದಮ್‌, ಬಸವರಾಜ ಮಣ್ಣೂರಮಠ, ಕಬೇರ ಪವಾರ, ನಾಗರಾಜ ಬಡಿಗೇರ, ಆನಂದ ದಲಬಂಜನ ಪಾಲ್ಗೊಂಡಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು