ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರದ ಯೋಜನೆಗಳನ್ನು ಮುಟ್ಟಿಸಲು ಕರೆ

ಬಿಜೆಪಿ ಮಹಾನಗರ ಜಿಲ್ಲಾ ಒಬಿಸಿ ಕಾರ್ಯಕಾರಿಣಿ ಸಭೆ
Last Updated 1 ನವೆಂಬರ್ 2020, 9:27 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಹಿಂದುಳಿದ ವರ್ಗಗಳ ಜನರಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ವಿವಿಧ ಯೋಜನೆಗಳ ಮೂಲಕ ನೀಡಿರುವ ಕೊಡುಗೆಗಳನ್ನು ಮುಂದಿನ ಮೂರು ವರ್ಷಗಳ ಅವಧಿಯಲ್ಲಿ ಸಮಾಜದ ಎಲ್ಲರಿಗೂ ಮುಟ್ಟಿಸಬೇಕು ಎಂದು ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ ವಿವೇಕಾನಂದ ಡಬ್ಬಿ ಕರೆ ನೀಡಿದರು.

ಹುಬ್ಬಳ್ಳಿ–ಧಾರವಾಡ ಮಹಾನಗರ ಜಿಲ್ಲಾ ಒಬಿಸಿ ನಗರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು‌ ‘15 ವರ್ಷಗಳ ಹಿಂದೆ ಆರಂಭವಾದ ಒಬಿಸಿ ಮೋರ್ಚಾ ನಿರಂತರ ಪ್ರವಾಸಗಳನ್ನು ಮಾಡುತ್ತ ಪಕ್ಷ ಸಂಘಟನೆ ಕಾರ್ಯದಲ್ಲಿ ತೊಡಗಿಕೊಂಡಿದೆ. ಧಾರವಾಡ, ಬೆಳಗಾವಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪಕ್ಷದ ಸಂಘಟನೆ ಅತ್ಯುತ್ತಮವಾಗಿದ್ದು, ಉಳಿದ ಜಿಲ್ಲೆಗಳಲ್ಲಿಯೂ ಇದೇ ಮಾದರಿಯಲ್ಲಿ ಸಂಘಟನೆ ಮಾಡಬೇಕಾಗಿದೆ’ ಎಂದರು.

‘ವಿವಿಧ ನಿಗಮಗಳ ಮೂಲಕ ಹಿಂದುಳಿದ ವರ್ಗದವರಿಗೆ ರಾಜ್ಯ ಮತ್ತು ಕೇಂದ್ರ ಬಿಜೆಪಿ ಸರ್ಕಾರಗಳು ಹಲವಾರು ಯೋಜನೆಗಳನ್ನು ನೀಡಿದ್ದು, ಇವು ಪರಿಣಾಮಕಾರಿಯಾಗಿ ಜನರಿಗೆ ಗೊತ್ತಾಗಬೇಕಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸೌಲಭ್ಯಗಳು ಸಿಗಬೇಕು ಎನ್ನುವುದು ಮೋರ್ಚಾದ ಗುರಿಯಾಗಿದೆ’ ಎಂದರು.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಮಾತನಾಡಿ ‘ಬೇರೆ ಪಕ್ಷಗಳು ಚುನಾವಣಾ ಸಮಯದಲ್ಲಿ ಮಾತ್ರ ಸಂಘಟನೆಯಲ್ಲಿ ತೊಡಗುತ್ತವೆ. ಭಿನ್ನ ಪಕ್ಷವಾಗಿ ಗುರುತಿಸಿಕೊಂಡಿರುವ ಬಿಜೆಪಿ ಯಾವಾಗಲೂ ಮೂರು ‘ಎಸ್‌’ (ಶಿಸ್ತು, ಸಂಯಮ ಮತ್ತು ಸಂಘಟನೆ) ಗಳಿಗೆ ಮಹತ್ವ ನೀಡಿದೆ. ಪ್ರತಿ ಭಾನುವಾರ ಎರಡು ಗಂಟೆಗಳ ಕಾಲ ಪ್ಲಾಸ್ಟಿಕ್‌ ತ್ಯಾಜ್ಯ ಸ್ವಚ್ಛಗೊಳಿಸಿ ‘ಸ್ವಚ್ಛ ಸಂಡೇ’ ಆಚರಿಸಲಾಗುತ್ತಿದೆ’ ಎಂದರು.

ಒಬಿಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಸುರೇಶ ಬಾಬು, ರವೀಂದ್ರ ದಂಡಿನ್‌, ಕಾರ್ಯದರ್ಶಿ ಸತೀಶ ಶೇಜವಾಡಕರ, ಮಹಾನಗರ ಜಿಲ್ಲಾ ಒಬಿಸಿ ಉಸ್ತುವಾರಿ ತಿಪ್ಪಣ್ಣ ಮಜ್ಜಗಿ, ಜಿಲ್ಲಾ ಘಟಕದ ಅಧ್ಯಕ್ಷ ಶಂಕರ ಶೆಳಕೆ, ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ, ಪಕ್ಷದ ಮುಖಂಡರಾದ ಪ್ರಭು ನಲವಗುಂದ ಮಠ, ಜಯತೀರ್ಥ ಕಟ್ಟಿ, ದತ್ತಮೂರ್ತಿ ಕುಲಕರ್ಣಿ, ವಕ್ತಾರ ರವಿ ನಾಯ್ಕ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT