ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹದಾಯಿ ಚರ್ಚೆಯಾಗದಿದ್ದರೆ ಹೋರಾಟದ ಎಚ್ಚರಿಕೆ- ಸಿದ್ದಪ್ಪ ಮುಪೈನವರು

Last Updated 20 ಡಿಸೆಂಬರ್ 2021, 16:02 IST
ಅಕ್ಷರ ಗಾತ್ರ

ನವಲಗುಂದ: ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಪ್ರಮುಖ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡುವುದನ್ನು ಬಿಟ್ಟು ಎಲ್ಲ ಪಕ್ಷದವರು ಕಾಲಹರಣ ಮಾಡುತ್ತಿದ್ದಾರೆ. ಸಮಯ ವ್ಯರ್ಥ ಮಾಡದೆ ಮಹದಾಯಿ ಬಗ್ಗೆಯೂ ಚರ್ಚೆಯಾಗಬೇಕು. ಇಲ್ಲವಾದರೆ ಹೋರಾಟ ಮಾಡಬೇಕಾಗುತ್ತದೆ ಎಂದು ಮಹದಾಯಿ ಕಳಸಾ ಬಂಡೂರಿ ರೈತ ಹೋರಾಟ ಒಕ್ಕೂಟದ ಅಧ್ಯಕ್ಷ ಸಿದ್ದಪ್ಪ ಮುಪೈನವರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಸೋಮವಾರ ಹುಬ್ಬಳ್ಳಿ–ವಿಜಯಪುರ ರಾಷ್ಟ್ರೀಯ ಹೆದ್ದಾರಿ ಮೇಲೆ ಪ್ರತಿಭಟನೆ ಮಾಡಿದ ಹೋರಾಟಗಾರರು ಮಹದಾಯಿ ಯೋಜನೆಗಾಗಿ ₹1,677 ಕೋಟಿ ಹಣ ಕಾಯ್ದಿರಿಸಲಾಗಿದೆ ಎಂದು ಹೇಳುತ್ತಿದ್ದಾರೆ. ಆದರೆ ಕೆಲಸ ಪ್ರಾರಂಭ ಮಾಡುವ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಅಧಿವೇಶನದಲ್ಲಿ ಚರ್ಚೆ ಮಾಡಿ ತಕ್ಷಣವೇ ಕೆಲಸ ಪ್ರಾರಂಭ ಮಾಡಲು ಕ್ರಮ ಜರುಗಿಸಬೇಕು. ಇಲ್ಲವಾದಲ್ಲಿ ಎಲ್ಲ ರೈತ ಸಂಘಟನೆಯವರು ಒಗ್ಗೂಡಿ ಮತ್ತೊಮ್ಮೆ ಉಗ್ರ ಹೋರಾಟ ಮಾಡುವುದಾಗಿ ಮುಖ್ಯಮಂತ್ರಿಗೆ ಸಲ್ಲಿಸಿರುವ ಮನವಿಯಲ್ಲಿ ಎಚ್ಚರಿಕೆ ನೀಡಿದ್ದಾರೆ.

ಬೆಳಗಾವಿಯಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಕಿಡಗೇಡಿಗಳು ಭಗ್ನಗೊಳಿಸಿದ್ದಾರೆ. ಅಷ್ಟೇ ಅಲ್ಲದೇ ಎಂಇಎಸ್‌ನವರು ಕನ್ನಡ ಬಾವುಟ ಸುಟ್ಟುಹಾಕಿ ಕಾನೂನು ಸುವ್ಯವಸ್ಥೆ ಹಾಳು ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಹೋರಾಟ ಸಮಿತಿ ಅಧ್ಯಕ್ಷ ಸಿದ್ದಪ್ಪ ಮುಪೈನವರ, ಸುಭಾಸಚಂದ್ರಗೌಡ ಪಾಟೀಲ, ಮಲ್ಲಪ್ಪ ಬಸೆಗೊಣ್ಣವರ, ಕೆ.ಬಿ.ತಳವಾರ, ಮಲ್ಲೇಶ ಉಪ್ಪಾರ, ಸಂಗಪ್ಪ ನಿಡವಣಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT