ಸೋಮವಾರ, 9 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ವೈದ್ಯ ವಿದ್ಯಾರ್ಥಿನಿ ಕೊಲೆ | 17ರಂದು ರಾಜ್ಯದಾದ್ಯಂತ ಪ್ರತಿಭಟನೆ: ಸಚಿನ್‌

Published 16 ಆಗಸ್ಟ್ 2024, 16:01 IST
Last Updated 16 ಆಗಸ್ಟ್ 2024, 16:01 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ನಡೆದ ವೈದ್ಯಕೀಯ ವಿದ್ಯಾರ್ಥಿನಿಯ ಕೊಲೆ ಪ್ರಕರಣವನ್ನು ಖಂಡಿಸಿ, ಎಬಿವಿಪಿ ರಾಜ್ಯದಾದ್ಯಂತ ಇದೇ 17ರಂದು ಪ್ರತಿಭಟನೆ ನಡೆಸಲಿದೆ ಎಂದು ಎಬಿವಿಪಿ ರಾಜ್ಯ ಕಾರ್ಯದರ್ಶಿ ಸಚಿನ್‌ ಕುಳಗೇರಿ ಹೇಳಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು, ‘ವೈದ್ಯರಾದವರು ದೇವರಿಗೆ ಸಮಾನ. ಆದರೆ, ಪಶ್ಚಿಮ ಬಂಗಾಳದಲ್ಲಿ ಅವರಿಗೆ ಸೂಕ್ತ ಭದ್ರತೆ ಇಲ್ಲ. ಅಲ್ಲದೇ, ಅಲ್ಲಿನ ಸರ್ಕಾರ ಈ ಹಿಂದೆ ಇಂತಹ ಎಷ್ಟೋ ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಿಲ್ಲ. ಆರೋಪಿಗಳ ಬೆನ್ನಿಗೆ ಅಲ್ಲಿನ ಸರ್ಕಾರ ನಿಂತಿರುವುದು ಕಂಡುಬಂದಿದೆ. ಇದರಿಂದಾಗಿ ಅಲ್ಲಿ ಮಹಿಳೆಯರ ಮೇಲೆ ನಿರಂತರವಾಗಿ ಅತ್ಯಾಚಾರ ಪ್ರಕರಣಗಳು ನಡೆಯುತ್ತಿವೆ’ ಎಂದು ಅವರು ಆರೋಪಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಈ ಘಟನೆಗಳು ಮಾನವೀಯತೆಗೆ ನಾಚಿಕೆಗೇಡು. ಈ ಘಟನೆಗಳನ್ನು ಗಮನದಲ್ಲಿಟ್ಟುಕೊಂಡು ಮತ್ತು ಮಮತಾ ಸರ್ಕಾರದ ವಿರುದ್ಧ ಎಬಿವಿಪಿ ಇದೇ ತಿಂಗಳ 17ರಂದು ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲು ಕರೆ ನೀಡಿದೆ ಎಂದು ಅವರು ಹೇಳಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT