ಭಾನುವಾರ, ಜುಲೈ 3, 2022
27 °C

ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸರ್ಕಾರ ತಕ್ಷಣವೇ ಸ್ಪಂದಿಸಲಿ: ಎಬಿವಿಪಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸದಸ್ಯರು ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸರ್ಕಾರ ತಕ್ಷಣವೇ ಸ್ಪಂದಿಸಬೇಕು ಎಂದು ರಾಜನಗರದ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ  ಪ್ರತಿಭಟನೆ ನಡೆಸಿದರು.

ರಾಜ್ಯ ಸಹ ಕಾರ್ಯದರ್ಶಿ ಕಾವ್ಯ ಜೋಶಿ ಮಾತಾನಾಡಿ ರಾಜ್ಯದಲ್ಲಿ ಅತಿಥಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳುವುದರ ಮೂಲಕ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅನುವು ಮಾಡಿಕೊಡಬೇಕು. ಎಲ್ಲಾ ವಿದ್ಯಾರ್ಥಿಗಳಿಗೆ  ವಸತಿ ವ್ಯವಸ್ಥೆ ಕಲ್ಪಿಸಬೇಕು. ತಕ್ಷಣ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದು ಬಸ್ಸಿನ ಕೊರತೆಯಿದೆ ಆದ ಕಾರಣ ಹೆಚ್ಚಿನ ಬಸ್ ವ್ಯವಸ್ಥೆ ಮಾಡಬೇಕು ಎಂದರು.

ಮಹಾವಿದ್ಯಾಲಯದಲ್ಲಿ ಖಾಲಿ ಇರುವ ಅಧ್ಯಾಪಕರ ಕೊರತೆಯಿಂದಾಗಿ ವಿದ್ಯಾರ್ಥಿಗಳ ಕಲಿಕೆಗೆ ತೊಂದರೆ ಆಗುತ್ತಿದ್ದು ಶೀಘ್ರದಲ್ಲಿ ಉಪನ್ಯಾಸಕರ ನೇಮಕಾತಿ ಮಾಡಬೇಕು ಎಂದು ಆಗ್ರಹಿಸಿದರು.

ನಗರ ಸಂಘಟನಾ ಕಾರ್ಯದರ್ಶಿ ಬಸವರಾಜ್ ಡೋಣಿ, ಕಾರ್ಯಾಲಯ ಕಾರ್ಯದರ್ಶಿ ಸೋಮು ಪಾಟೀಲ, ತಾಲ್ಲೂಕು ಸಂಚಾಲಕ ಸುಹಾಸ್ ನಡಕಟ್ಟಿ, ನಗರ ಸಹ ಕಾರ್ಯದರ್ಶಿ ರಜತ್ ಹಿರೇಮಠ, ನಗರ ವಿದ್ಯಾರ್ಥಿನಿ ಪ್ರಮುಖ ಪುಷ್ಪಾ ಗಾಡರೆಡ್ಡಿ, ನಗರ ಸಂಪರ್ಕ ಪ್ರಮುಖ ರಾಕೇಶ್ ಕರ್ಜಗಿಮಠ, ನಗರ ವಿದ್ಯಾರ್ಥಿ ‌ವಸತಿ ನಿಲಯ ಪ್ರಮುಖ ಈರಣ್ಣ ಶಿವುಕುಮಾರ ಮಟ್ಟಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು