ಭಾನುವಾರ, ಜುಲೈ 25, 2021
21 °C

ಲಾರಿ ಡಿಕ್ಕಿ: ವೃದ್ದೆ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಆಳಂದ: ಪಟ್ಟಣದ ಲಾಡ್ಲೆ ಮಶಾಕ ದರ್ಗಾ ಚೌಕ್‌ ಸಮೀಪದ ಮುಖ್ಯರಸ್ತೆಯಲ್ಲಿ ಹಾದು ಹೋಗುತ್ತಿದ್ದ ವೃದ್ದೆಗೆ ಹಿಂದಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದ್ದರಿಂದ ಸ್ಥಳದಲ್ಲಿಯೇ ಮೃತಪಟ್ಟ ಅವಘಡ ಮಂಗಳವಾರ ನಡೆದಿದೆ.

ರಫೀಕಾ ಬೇಗಂ ಖಲೀಲ ಕಾಕರಂಬೆ ಅನ್ಸಾರಿ (60) ಮೃತಪಟ್ಟವರು. ಅನಾಥೆಯಾದ ಇವರು ದರ್ಗಾದಲ್ಲಿಯೇ ವಾಸ ಮಾಡುತ್ತಿದ್ದರು. ದರ್ಗಾದತ್ತ ಹೊರಡುವಾಗ ಲಾರಿ ಬಂದು ಡಿಕ್ಕಿ ಹೊಡೆದಿದೆ. ಲಾರಿ ಚಾಲಕ ಪರಾರಿಯಾಗಿದ್ದು, ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.