ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧಾರವಾಡ: ತೇಗುರು ಬಳಿ ಅಪಘಾತ; ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಅಪಾಯದಿಂದ ಪಾರು

ಬೆಳಗಾವಿ ಸಿದ್ದಸಂಸ್ಥಾನದ ನೀಡಸೋಸಿ ಮಠದ ಸ್ವಾಮೀಜಿ
Last Updated 6 ಜುಲೈ 2022, 14:41 IST
ಅಕ್ಷರ ಗಾತ್ರ

ಧಾರವಾಡ: ಇಲ್ಲಿನ ತೇಗುರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಸಂಜೆ ರಸ್ತೆ ಅಪಘಾತ ನಡೆದಿದ್ದು, ಕಾರಿನಲ್ಲಿದ್ದ ಬೆಳಗಾವಿ ಸಿದ್ದಸಂಸ್ಥಾನದ ನೀಡಸೋಸಿ ಮಠದ ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಅಪಾಯದಿಂದ ಪಾರಾಗಿದ್ದಾರೆ.

ಹುಬ್ಬಳ್ಳಿಯಿಂದ ಬೆಳಗಾವಿ ಕಡೆ ಚಲಿಸುತ್ತಿದ್ದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿ ಆಗಿದೆ. ಸೀಟ್ ಬೆಲ್ಟ್ ಹಾಕಿದ್ದರಿಂದ ಸ್ವಾಮೀಜಿ ಸುರಕ್ಷಿತವಾಗಿದ್ದರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ ಜಗಲಾಸರ್ ತಿಳಿಸಿದ್ದಾರೆ.

ಅಪಘಾತದಿಂದಾಗಿ ಹೆದ್ದಾರಿಯಲ್ಲಿ ವಾಹನ ದಟ್ಟಣೆ ಉಂಟಾಗಿತ್ತು. ಗರಗ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಕಾರುನ್ನು ರಸ್ತೆ ಪಕ್ಕ ಸರಿಸಿ ವಾಹನ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಸ್ವಾಮೀಜಿ ಅವರನ್ನು ಬೆಳಗಾವಿ ಕೆ ಎಲ್ ಇ ಆಸ್ಪತ್ರೆಗೆ ದಾಖಲಿಸಲಾಗಿದೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT