ಮಂಗಳವಾರ, ಅಕ್ಟೋಬರ್ 22, 2019
26 °C

ಕಾರು-  ಬಸ್ ಮುಖಾಮುಖಿ ಡಿಕ್ಕಿ: ಎರಡು ಸಾವು, ಇಬ್ಬರಿಗೆ ಗಂಭೀರ ಗಾಯ

Published:
Updated:

ಹುಬ್ಬಳ್ಳಿ: ಅಣ್ಣಿಗೇರಿ ತಾಲ್ಲೂಕಿನ ಭದ್ರಾಪುರ ಬಳಿ ಇನ್ನೋವಾ ಕಾರು ಮತ್ತು ವಾಯವ್ಯ ಸಾರಿಗೆ ಬಸ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತರಲ್ಲಿ ಡೇವಿಡ್ ಸುಧಾಕರ್ ಎಂಬುವವರ ಗುರುತು ಮಾತ್ರ ಪತ್ತೆಯಾಗಿದ್ದು ಉಳಿದವರ ಗುರುತು ಪತ್ತೆಯಾಗಿಲ್ಲ. 

ಗಂಭೀರವಾಗಿ ಗಾಯಗೊಂಡಿರುವ ಜ್ಞಾನಮ್ಮ ಹಾಗೂ ರತ್ನ ಸುಭಾಷಿಣಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಡೇವಿಡ್ ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಯವರು. ಪ್ಯಾರಾಲಿಸಿಸ್ ನಿಂದ ಬಳಲುತ್ತಿದ್ದ ತಮ್ಮ ತಾಯಿ ಜ್ಞಾನಮ್ಮ ಅವರನ್ನು ಕಾರವಾರದ ಆಸ್ಪತ್ರೆಗೆ ಡೇವಿಡ್‌ ಕರೆದೊಯ್ಯುತ್ತಿದ್ದರು.

ಡಿಕ್ಕಿಯ ರಭಸಕ್ಕೆ ಬಸ್ ಪಲ್ಟಿಯಾಗಿದೆ. ಹನ್ನೆರಡು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಾಗಳಾಗಿದ್ದು, ಅಣ್ಣಿಗೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

Post Comments (+)