ಶನಿವಾರ, ಜನವರಿ 16, 2021
28 °C

ಅಪಘಾತ: ಒಂದೇ ಕುಟುಂಬದ ಮೂವರು ಸೇರಿ ನಾಲ್ವರು ಸ್ಥಳದಲ್ಲೇ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಣ್ಣಿಗೇರಿ: ಅಣ್ಣಿಗೇರಿ ಸಮೀಪದ ಗದಗ ರಸ್ತೆಯ ದುಂದೂರ ಕ್ರಾಸ ಬಳಿ ಬುಧವಾರ ಬೆಳಗಿನ ಜಾವ ಕಾರು ಹಾಗೂ ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಕುಟುಂಬದ ಮೂವರು ಸೇರಿದಂತೆ ನಾಲ್ಕು ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರು ಒಂದೇ ಕುಟುಂಬದ ಸಣ್ಣ ಗಂಗಣ್ಣ(52), ನಾಗಮ್ಮ(48), ಈರಣ್ಣ(24) ಹಾಗೂ ಹನಮಂತ (37)ಎಂದು ತಿಳಿದು ಬಂದಿದೆ. 

ಗಾಯಗೊಂಡ ಸಣ್ಣಈರಣ್ಣ(50) ಮತ್ತು ಲಕ್ಷ್ಮಿ (20)ಎಂಬುವರನ್ನು ಹೆಚ್ಚಿನ ಚಿಕಿತ್ಸೆಗೆ ಗದಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇವರು ರಾಯಚೂರು ಜಿಲ್ಲೆಯ ಮಾನ್ವಿ ಮೂಲದವರಾಗಿದ್ದಾರೆ. ಪಾರ್ಶ್ವವಾಯು ಚಿಕಿತ್ಸೆಗಾಗಿ ಕಾರವಾರ ತಾಲ್ಲೂಕಿನ ಹಳಗಾ ಗ್ರಾಮಕ್ಕೆ ಹೊರಟಿದ್ದರು. 

 


ಅಪಘಾತಕ್ಕೀಡಾಗಿರುವ ಕ್ರೂಸರ್

 ಹುಬ್ಬಳ್ಳಿಯಿಂದ ಬಳ್ಳಾರಿಗೆ ದಿನಪತ್ರಿಕೆ ವಿತರಣೆಗೆ ಹೊರಟಿತ್ತು ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಸಿಪಿಐ ಚಂದ್ರಶೇಖರ ಮಠಪತಿ, ಪಿಎಸ್ಐ ಲಾಲಸಾಬ ಜೂಲಕಟ್ಟಿ ಭೇಟಿ ನೀಡಿ ಪರಿಶೀಲಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು