ಧಾರವಾಡ: ‘ಕಾಳಸಂತೆಯಲ್ಲಿ ಎಲ್ಪಿಜಿ ಸಿಲಿಂಡರ್ಗಳನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಜಿಲ್ಲಾಧಿಕಾರಿ ಸ್ನೇಹಲ್ ಆರ್. ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ನೂತನ ಸಭಾಂಗಣದಲ್ಲಿ ಶುಕ್ರವಾರ ನಡೆದ ಎಲ್ಪಿಜಿ ವಿತರಕರು, ಹೋಟೆಲ್ ಮಾಲೀಕರು ಮತ್ತು ಅನಿಲ ಏಜೆನ್ಸಿಗಳ ಪ್ರತಿನಿಧಿಗಳ ಸಭೆಯಲ್ಲಿ ಅವರು ಮಾತನಾಡಿದರು.

‘ಗೃಹಬಳಕೆಯ ಸಿಲಿಂಡರ್ ಅನ್ನು ಒಮ್ಮೆ ಬುಕ್ ಮಾಡಿದ ನಂತರ ಮತ್ತೊಮ್ಮೆ ಬುಕ್ ಮಾಡಲು ನಗರ ಪ್ರದೇಶದ ಗ್ರಾಹಕರಿಗೆ 25 ದಿನ ಮತ್ತು ಗ್ರಾಮೀಣ ಭಾಗದ ಗ್ರಾಹಕರಿಗೆ 45 ದಿನ ನಿಗದಿಪಡಿಸಲಾಗಿದೆ. ವದಂತಿಗಳಿಗೆ ಕಿವಿಗೊಡಬಾರದು. ಅವಸರಪಡದೆ ಸಹಕಾರ ನೀಡಬೇಕು’ ಎಂದರು.

‘ಸರ್ಕಾರದ ನಿರ್ದೇಶನದಂತೆ ಗ್ರಾಹಕರಿಗೆ ಸಿಲಿಂಡರ್ ವಿತರಿಸಲಾಗುತ್ತಿದೆ. ಸಿಲಿಂಡರ್ಗಳ ವಿತರಣೆಯಲ್ಲಿ ವೈದ್ಯಕೀಯ, ಶಾಲಾ–ಕಾಲೇಜು, ಅಂಗನವಾಡಿ, ವಿದ್ಯಾರ್ಥಿನಿಲಯ, ಇಂದಿರಾ ಕ್ಯಾಂಟೀನ್ಗಳಿಗೆ ಆದ್ಯತೆ ನೀಡಬೇಕು’ ಎಂದು ಹೇಳಿದರು.

‘ಜಿಲ್ಲೆಯಲ್ಲಿ ಎಲ್ಪಿಜಿ ಸಿಲಿಂಡರ್ಗಳ ಕೊರತೆ ಇಲ್ಲ. ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಸಿಲಿಂಡರ್ ಬುಕ್ ಮಾಡಿದ ನಂತರ ಕನಿಷ್ಠ ಅವಧಿವರೆಗೆ ಕಾಯಬೇಕು’ ಎಂದರು.

ಧಾರವಾಡ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಮಹೇಶ ಶೆಟ್ಟಿ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಜಂಟಿ ನಿರ್ದೇಶಕ ವಿನೋದಕುಮಾರ ಹೆಗ್ಗಳಗಿ, ಐಒಸಿ, ಬಿಪಿಸಿ, ಎಚ್ಪಿಸಿ ಕಂಪನಿಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.