ಸೋಮವಾರ, 11 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮೀರ್ ಅಹಮದ್ ವಜಾಕ್ಕೆ ವಿಶ್ವೇಶ್ವರ ಹೆಗಡೆ ಕಾಗೇರಿ ಒತ್ತಾಯ

Published 17 ನವೆಂಬರ್ 2023, 16:09 IST
Last Updated 17 ನವೆಂಬರ್ 2023, 16:09 IST
ಅಕ್ಷರ ಗಾತ್ರ

ಸಿದ್ದಾಪುರ/ಗದಗ: ‘ವಿಧಾನಸಭಾಧ್ಯಕ್ಷ ಹುದ್ದೆಗೆ ಧರ್ಮದ ನಂಟು ಬೆಸೆಯುವ ಪ್ರಯತ್ನ ನಡೆಸಿದ ಸಚಿವ ಜಮೀರ್ ಅಹಮದ್ ಖಾನ್ ಅವರನ್ನು ರಾಜ್ಯ ಸಚಿವ ಸಂಪುಟದಿಂದ ವಜಾಗೊಳಿಸಬೇಕು’ ಎಂದು ಬಿಜೆಪಿ ನಾಯಕ ವಿಶ್ವೇಶ್ವರ ಹೆಗಡೆ ಕಾಗೇರಿ ಒತ್ತಾಯಿಸಿದರು.

‘ಸಾಂವಿಧಾನಿಕವಾಗಿ ಪಕ್ಷಾತೀತ, ಧರ್ಮಾತೀತವಾದ ಹುದ್ದೆಗೆ ಧರ್ಮದ ನಂಟು ಬೆಸೆಯುವ ಮೂಲಕ ಈ ಹುದ್ದೆಯ ಹೆಸರಿನಲ್ಲಿ ರಾಜಕೀಯ ಲಾಭಕ್ಕಾಗಿ ಸಚಿವರು ಯತ್ನಿಸಿದ್ದಾರೆ. ಇದನ್ನು ವಿಧಾನಸಭಾಧ್ಯಕ್ಷರು ಗಂಭೀರವಾಗಿ ಪರಿಗಣಿಸಿ ಸಚಿವರ ವಿರುದ್ಧ ಶಿಸ್ತುಕ್ರಮಕ್ಕೆ ಮುಂದಾಗಬೇಕು. ಅವರನ್ನು ಕೂಡಲೇ ಸಂಪುಟದಿಂದ ವಜಾಗೊಳಿಸಬೇಕು’ ಎಂದು ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.

‘ಸಂವಿಧಾನಕ್ಕೆ ಅಪಮಾನ ಮಾಡುವಂತಹ ಹೇಳಿಕೆ ನೀಡಿರುವ ಜಮೀರ್‌ ಅಹಮದ್ ಅವರು ಕ್ಷಮೆ ಕೇಳಬೇಕು. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು’ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಗದಗದಲ್ಲಿ ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT