ಮಂಗಳವಾರ, ನವೆಂಬರ್ 12, 2019
28 °C

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಖಾಲಿ ಹುದ್ದೆ ಭರ್ತಿಗೆ ಕ್ರಮ: ಶಶಿಕಲಾ

Published:
Updated:

ಹುಬ್ಬಳ್ಳಿ: ‘ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿರುವ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಅಣ್ಣಾ ಸಾಹೇಬ ಜೊಲ್ಲೆ ಹೇಳಿದರು.

ಇಲ್ಲಿನ ಆನಂದನಗರದಲ್ಲಿ ಶನಿವಾರ ಅಂಧಮಕ್ಕಳ ಸರ್ಕಾರಿ ಶಾಲೆಯ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ‘ನಾನು ಅಧಿಕಾರ ಸ್ವೀಕರಿಸಿದ ಬಳಿಕ 52 ಸಿಡಿಪಿಒ ಹಾಗೂ 265 ಮೇಲ್ವಿಚಾರಕರ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿದ್ದೇನೆ. ಅಧಿಕಾರಿಗಳಿಗೆ ಬಡ್ತಿ, ನೌಕರರ ಬಾಕಿ ವೇತನ ಹಾಗೂ ನಿವೃತ್ತರ ಪಿಂಚಣಿ ಸಮಸ್ಯೆ ನಿವಾರಿಸಲು ಆದ್ಯತೆ ನೀಡುವೆ. ಇಲಾಖೆಯಲ್ಲಿ ಕಡಿಮೆ ಗೌರವಧನಕ್ಕೆ ಹಲವರು ಕೆಲಸ ಮಾಡುತ್ತಿದ್ದಾರೆ. ಅವರ ಗೌರವಧನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುವುದು’ ಎಂದರು.

‘ಹಿರಿಯ ನಾಗರಿಕರಿಗೆ ಅವರಿರುವ ಸ್ಥಳದಲ್ಲೇ ಚಿಕಿತ್ಸಾ ಸೌಲಭ್ಯ ಒದಗಿಸುವುದಕ್ಕಾಗಿ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಮೊಬೈಲ್ ಚಿಕಿತ್ಸಾ ಸೌಲಭ್ಯ ಒದಗಿಸುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ’ ಎಂದು ಹೇಳಿದರು.

ಪ್ರತಿಕ್ರಿಯಿಸಿ (+)