ಮಂಗಳವಾರ, ನವೆಂಬರ್ 19, 2019
27 °C

ಪೊಲೀಸ್ ಇಲಾಖೆ ಆಧುನೀಕರಣಕ್ಕೆ ಕ್ರಮ: ಬೊಮ್ಮಾಯಿ

Published:
Updated:

ಹುಬ್ಬಳ್ಳಿ: ‘ಬದಲಾದ ಕಾಲಕ್ಕೆ ತಕ್ಕಂತೆ ಪೊಲೀಸ್ ಇಲಾಖೆಯನ್ನು ಆಧುನೀಕರಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಹುಬ್ಬಳ್ಳಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಇತ್ತೀಚೆಗೆ ಅಪರಾಧದ ಸ್ವರೂಪಗಳು ಬದಲಾಗಿವೆ. ತಂತ್ರಜ್ಞಾನ ಬಳಸಿ, ಎಲ್ಲೋ ಕುಳಿತು ಬ್ಯಾಂಕ್ ಖಾತೆಗೆ ಕನ್ನ ಹಾಕುವವರ ಸಂಖ್ಯೆ ಹೆಚ್ಚುತ್ತಿದೆ. ಅದಕ್ಕಾಗಿ ಪೊಲೀಸ್ ವ್ಯವಸ್ಥೆಯನ್ನು ಆಧುನೀಕರಣಗೊಳಿಸಬೇಕಾದ ಅಗತ್ಯವಿದೆ. ಆ ನಿಟ್ಟಿನಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಈಗಾಗಲೇ ಸಭೆ ನಡೆಸಿದ್ದೇನೆ’ ಎಂದರು.

ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ನಡೆದ ಸರಣಿ ಚಾಕು ಇರಿತ ಘಟನೆಗಳ ಕುರಿತು ಪ್ರತಿಕ್ರಿಯಿಸಿದ ಅವರು, ‘ಪ್ರಕರಣಗಳ ಬಗ್ಗೆ ಮಾಹಿತಿ ಪಡೆದಿದ್ದು, ಮುಂದೆ ಹೀಗಾಗದಂತೆ ಎಚ್ಚರ ವಹಿಸಲು ಇಲ್ಲಿನ ಪೊಲೀಸರಿಗೆ ಸೂಚಿಸಿದ್ದೇನೆ’ ಎಂದರು.

ಪ್ರತಿಕ್ರಿಯಿಸಿ (+)