ಧಾರವಾಡ: ಕಾಂಗ್ರೆಸ್ ಮುಖಂಡ ವಿನಯ ಕುಲಕರ್ಣಿ ಮನೆಗೆ ನಟ ದರ್ಶನ್ ಭೇಟಿ

ಧಾರವಾಡ: ಕಾಂಗ್ರೆಸ್ ಮುಖಂಡ ವಿನಯ ಕುಲಕರ್ಣಿ ಮನೆಗೆ ನಟ ದರ್ಶನ್ ಭೇಟಿ ನೀಡಿ ಕುಟುಂಬಕ್ಕೆ ಸಮಾಧಾನ ಹೇಳಿದರು.
ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲಿನಲ್ಲಿರುವ ವಿನಯ ಕುಲಕರ್ಣಿ ಹಾಗೂ ದರ್ಶನ್ ಒಳ್ಳೆಯ ಸ್ನೇಹಿತರಾಗಿದ್ದರು. ಕಳೆದಬಾರಿ ಇಲ್ಲಿಗೆ ಭೇಟಿ ನೀಡಿದ್ದಾಗ ವಿನಯ್ ಜೊತೆ ದರ್ಶನ್ ಚಕ್ಕಡಿ ಏರಿ ಸಂಭ್ರಮಿಸಿದ್ದರು.
ವಿನಯ ಕುಲಕರ್ಣಿ ಪತ್ನಿ ಶಿವಲೀಲಾ ಕುಲಕರ್ಣಿ, ಮಕ್ಕಳು ಹಾಗೂ ವಿನಯ್ ಅವರ ಅಕ್ಕ ಈ ಸಂದರ್ಭದಲ್ಲಿ ಇದ್ದರು.

ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದ ಯೋಗೀಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಜೈಲಿನಲ್ಲಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.