ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂಇಎಸ್ ನಿಷೇಧಿಸಲು ಸರ್ಕಾರ ಚಿಂತಿಸಲಿ: ನಟ ಪ್ರೇಮ್

Last Updated 19 ಡಿಸೆಂಬರ್ 2021, 6:36 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಪುಂಡಾಟ ಹೀಗೆ ಮುಂದುವರಿದರೆ ಅದನ್ನು ರಾಜ್ಯದಲ್ಲಿ ನಿಷೇಧಿಸುವ ಕುರಿತು ಸರ್ಕಾರ ಚಿಂತಿಸಬೇಕು ಎಂದು ಚಿತ್ರ ನಟ ಪ್ರೇಮ್‌ ಹೇಳಿದರು.

ಭಾನುವಾರ ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾವುದೇ ಸಂಘಟನೆಗಳಿರಲಿ ದೇಶದಲ್ಲಿ ಶಾಂತಿ ಕಾಪಾಡಬೇಕು. ಯಾವುದಾದರೂ ಸಂಘಟನೆಯಿಂದ ಪದೇ ಪದೇ ಶಾಂತಿ‌ ಕದಡುತ್ತದೆ ಎಂದಾದರೆ ಅದನ್ನು ನಿಷೇಧಿಸಲು ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಕನ್ನಡಿಗರು ಮತ್ತು ಮರಾಠಿಗರು ಪ್ರೀತಿ, ವಿಶ್ವಾಸದಿಂದ ಇದ್ದಾರೆ. ಅದನ್ನು ಹಾಳು ಮಾಡುವ ಕೆಲಸಕ್ಕೆ ಎಂಇಎಸ್ ಕೈ ಹಾಕಬಾರದು. ರಾಜ್ಯದಲ್ಲಿ ಮರಾಠಿ ಮತ್ತು ಹಿಂದಿ ಚಿತ್ರಗಳಿಗೂ ಅವಕಾಶ ನೀಡಲಾಗಿದೆ. ಇವುಗಳನ್ನು ಎಂಇಎಸ್ ಅರ್ಥ ಮಾಡಿಕೊಳ್ಳಬೇಕು ಎಂದರು.

ಎಂಇಎಸ್ ಸಾರ್ವಜನಿಕ ಆಸ್ತಿಪಾಸ್ತಿ ಹಾಳು ಮಾಡುವದರಿಂದ ಏನನ್ನೂ ಸಾಧಿಸುವುದಿಲ್ಲ. ಅಲ್ಲದೆ, ಎಂಇಎಸ್ ಬಗ್ಗೆ ಸರ್ಕಾರದ ನಿಲುವು ಏನಿದೆಯೋ ಗೊತ್ತಿಲ್ಲ. ಆದರೆ, ಕನ್ನಡಿಗರ ಮೇಲಿನ ದಬ್ಬಾಳಿಕೆ ಸಹಿಸುವುದಿಲ್ಲ. ನಾವು ಶಾಂತಿ ಪ್ರಿಯರು. ಇದನ್ನು ವಿರೋಧಿಸಿ ಕನ್ನಡ ಚಿತ್ರರಂಗ ಹೋರಾಟಕ್ಕೆ ಇಳಿದರೆ, ನಮ್ಮವರಿಗೆ ತೊ‌ದರೆಯಾಗಲಿದೆ ಎಂದು ಅಭಿಪ್ರಾಯೊಟ್ಟರು.

ನಂತರ, ನಟ ಪ್ರೇಮ್‌ ಸಿದ್ಧಾರೂಢ ಮಠದ ಗೋಶಾಲೆಗೆ ಭೇಟಿ ನೀಡಿ, ಗೋವುಗಳ ಮಾಹಿತಿ ಪಡೆದರು. ಕರುವನ್ನು ಎತ್ತುಕೊಂಡು ಸಂಭ್ರಮಿಸಿದರು. ಅವರ ಅಭಿಮಾನಿಗಳು ಸೆಲ್ಫಿಗೆ ಮುಗಿಬಿದ್ದ ದೃಶ್ಯ ಕಂಡು ಬಂದಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT