ಧಾರವಾಡ: ‘ರಾಜ್ಯ ಸರ್ಕಾರ ಶಿಕ್ಷಣವನ್ನು ಗ್ಯಾರಂಟಿ ಪಟ್ಟಿಗೆ ಸೇರಿಸಬೇಕು. ಕಿರಿಯ ಪ್ರಾಥಮಿಕ ಶಾಲಾ ಶಿಕ್ಷಣ ಹಂತದಲ್ಲಾದರೂ ಸಮಾನ ಶಿಕ್ಷಣ ಅನುಷ್ಠಾನಗೊಳಿಸಬೇಕು. ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮೂಲಸೌಲಭ್ಯ ಕಲ್ಪಿಸಬೇಕು’ ಎಂದು ಸಾಹಿತಿ ಪ್ರೊ.ಬರಗೂರು ರಾಮಚಂದ್ರಪ್ಪ ಒತ್ತಾಯಿಸಿದರು.

ಕರ್ನಾಟಕ ವಿದ್ಯಾವರ್ಧಕ ಸಂಘದಿಂದ ಶನಿವಾರ ನಡೆದ ‘ಧರೆಗೆ ದೊಡ್ಡವರು’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಸಮಾನ ಶಿಕ್ಷಣ ಜಾರಿಗೊಳಿಸಿದರೆ, ಅದು ಪ್ರಜಾಪ್ರಭುತ್ವಕ್ಕೆ ನೀಡುವ ಗೌರವ. ಅನೇಕ ಸರ್ಕಾರಿ ಶಾಲೆಗಳನ್ನು ಉತ್ತಮ ಸ್ಥಿತಿಗೆ ತಂದ ಉದಾಹರಣೆಗಳಿವೆ. ಆ ಶಾಲೆಗಳ ಶಿಕ್ಷಕರೊಂದಿಗೆ ಸಂವಾದ ನಡೆಸಿ ಸಲಹೆ ಪಡೆಯಬೇಕು’ ಎಂದರು.

‘ದೇಶದಲ್ಲಿ ಸಮಾನ ಶಾಲಾ ಶಿಕ್ಷಣ ನೀತಿ ಇಲ್ಲ. ಅಂಗನವಾಡಿ, ನರ್ಸರಿ, ಸರ್ಕಾರಿ ಶಾಲೆ, ಖಾಸಗಿ ಶಾಲೆ, ಇಂಗ್ಲಿಷ್ ಮಾಧ್ಯಮ, ಕನ್ನಡ ಮಾಧ್ಯಮ ಈ ಶೈಕ್ಷಣಿಕ ಅಸಮಾನತೆಯನ್ನು ತೊಡೆದು ಹಾಕುವುದು ಶಿಕ್ಷಣದ ಮೂಲ ನೀತಿ ಆಗಬೇಕು. ಈ ನಿಟ್ಟಿನಲ್ಲಿ ಯಾವ ಸರ್ಕಾರಗಳು ಗಮನ ಹರಿಸುತ್ತಿಲ್ಲ’ ಎಂದರು.

‘ತರಗತಿಯೊಳಗೆ ತಂತ್ರಜ್ಞಾನದ ಅತಿಪ್ರವೇಶವು ಅಧ್ಯಾಪಕರು ಮತ್ತು ವಿದ್ಯಾರ್ಥಿಗಳ ಸಂಬಂಧವನ್ನು ಹಾಳುಮಾಡುತ್ತದೆ. ತರಗತಿ ಎಂಬುದು ಪ್ರಜಾಸತ್ತಾತ್ಮಕ ಆವರಣ. ಅಲ್ಲಿ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳ ನಡುವೆ ಒಳ್ಳೆಯ ಸಂಬಂಧ ಬೆಳೆಯಬೇಕು. ತಂತ್ರಜ್ಞಾನದ ಹೆಸರಿನಲ್ಲಿ ತತ್ವಜ್ಞಾನವನ್ನು ಮರೆಯುತ್ತಿದ್ದೇವೆ. ಅಗತ್ಯಕ್ಕೆ ತಕ್ಕಷ್ಟು ಮಾತ್ರ ತಂತ್ರಜ್ಞಾನ ಬಳಸಬೇಕು‘ ಎಂದರು.

‘ಮಾನವಿಕ ವಿಷಯಗಳ ಅಧ್ಯಯನದ ಆಸಕ್ತಿ ಕಡಿಮೆಯಾಗಿದೆ. 10 ವರ್ಷಗಳ ಹಿಂದಿನ ಸಮೀಕ್ಷೆಯೊಂದರ ಪ್ರಕಾರ ಮಾನವಿಕ ವಿಷಯ ಅಧ್ಯಯನ ಮಾಡುವವರು ಶೇ 5ರಷ್ಟು ಮಾತ್ರ. ಸಾಹಿತ್ಯ, ಇತಿಹಾಸ, ಸಮಾಜಶಾಸ್ತ್ರ, ರಾಜ್ಯಶಾಸ್ತ್ರದ ಬಗ್ಗೆ ಸ್ವಲ್ಪವಾದರೂ ತಿಳಿದಿರದಿದ್ದರೆ ಒಳ್ಳೆಯ ಎಂಜಿನಿಯರ್, ವೈದ್ಯ, ತಂತ್ರಜ್ಞ ಆಗಲು ಸಾಧ್ಯವಿಲ್ಲ ಎಂಬುದು ನನ್ನ ನಂಬಿಕೆ. ಸಾಂಸ್ಕೃತಿಕ ಆಸಕ್ತಿಗಳು ನಮ್ಮನ್ನು ಮನುಷ್ಯರನ್ನಾಗಿ ರೂಪಿಸುತ್ತವೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.