ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನುದಾನ ಬಳಕೆಗೆ ಸಲಹೆ

Last Updated 14 ಫೆಬ್ರುವರಿ 2022, 4:51 IST
ಅಕ್ಷರ ಗಾತ್ರ

ಅಳ್ನಾವರ: ಪಟ್ಟಣದ ಸಮಗ್ರ ಅಭಿವೃದ್ಧಿಯ ಹಿತದೃಷ್ಟಿಯಿಂದ ನಗರೋತ್ಥಾನ ಯೋಜನೆಯಡಿ ₹5 ಕೋಟಿ ಮಂಜೂರಾಗಿದೆ. ಈ ಅನುದಾನ ಸರಿಯಾಗಿ ಬಳಕೆ ಮಾಡಿಕೊಳ್ಳಬೇಕು ಎಂದು ಶಾಸಕ ಸಿ.ಎಂ. ನಿಂಬಣ್ಣವರ ಹೇಳಿದರು.

ಇಲ್ಲಿನ ಪಟ್ಟಣ ಪಂಚಾಯ್ತಿ ಸಭಾಭವನದಲ್ಲಿ ಶನಿವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸದಸ್ಯರ ಅಹವಾಲು ಆಲಿಸಿ ಮಾತನಾಡಿದ ಅವರು ’ಸಮರ್ಪಕ ಕ್ರಿಯಾ ಯೋಜನೆ ರೂಪಿಸಬೇಕು. ಅದಕ್ಕೆ ತಕ್ಕಂತೆ ಕಾರ್ಯನಿರ್ವಹಿಸಬೇಕು’ ಎಂದರು.

’ಕಾಳಿ ನದಿಗೆ ನೀರು ತರುವ ಯೋಜನೆ, ಬೀದಿ ದೀಪಗಳ ನಿರ್ವಹಣೆ ಜೊತೆಗೆ ಪಟ್ಟಣ ಪಂಚಾಯ್ತಿ ಆರ್ಥಿಕ ಸ್ಥಿತಿ ಸುಧಾರಣೆಗೆ ಕ್ರಮ ಕೈಗೊಳ್ಳಬೇಕು. ಜನ ಸಾಮಾನ್ಯರು ತಮ್ಮ ಕೆಲಸಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಬೇಕು. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಪರಸ್ಪರ ಹೊಂದಾಣಿಕೆಯಿಂದ ಪಾರದರ್ಶಕವಾಗಿ ಕೆಲಸ ಮಾಡಬೇಕು’ ಎಂದರು.

ಪಟ್ಟಣ ಪಂಚಾಯ್ತಿ ಅಧ್ಯಕ್ಷೆ ಮಂಗಲಾ ರವಳಪ್ಪನವರ, ಉಪಾಧ್ಯಕ್ಷ ನದೀಮ ಕಾಂಟ್ರ್ಯಾಕ್ಟರ್, ಸ್ಥಾಯಿಸಮಿತಿ ಅಧ್ಯಕ್ಷ ರಾಜು ಯಲಕಪಾಟಿ ಹಾಗೂ ಸದಸ್ಯರು ಇದ್ದರು. ಮುಖ್ಯಾಧಿಕಾರಿ ಪಿ. ಕೆ. ಗುಡದಾರಿ, ಎಂಜಿನಿಯರ್‌ ಅಕ್ಕಮ್ಮ, ನಾಗರಾಜ ಗುರ್ಲಹೂಸೂರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT