ಹುಬ್ಬಳ್ಳಿ: ಕಥೆಗಾರ ಡಾ. ಪ್ರಹ್ಲಾದ ಅಗಸನಕಟ್ಟೆ ಅವರ ಸ್ಮರಣಾರ್ಥ ಇಲ್ಲಿನ ಅಕ್ಷರ ಸಾಹಿತ್ಯ ವೇದಿಕೆ ಆಯೋಜಿಸಿದ್ದ ‘ಪ್ರಹ್ಲಾದ ಅಗಸನಕಟ್ಟೆ ವಿದ್ಯಾರ್ಥಿ ಕಥಾ ಸ್ಪರ್ಧೆ’ಯಲ್ಲಿ ಮಣಿಕಂಠ ಗೊದಮನಿ ಅವರ ‘ನೇಣು’ ಕಥೆಗೆ 2025ನೇ ಸಾಲಿನ ಬಹುಮಾನ ದೊರಕಿದೆ.

‘ಬಹುಮಾನವು ₹5 ಸಾವಿರ ನಗದು, ಪ್ರಶಸ್ತಿ ಫಲಕ ಒಳಗೊಂಡಿದೆ. ಹುಬ್ಬಳ್ಳಿಯ ಅಕ್ಷರ ಸಾಹಿತ್ಯ ವೇದಿಕೆ ಹಾಗೂ ಶ್ರೀಮತಿ ವಿಜಯಾ ಅಗಸನಕಟ್ಟೆ ಸಹಯೋಗದಲ್ಲಿ ಎಂಟು ವರ್ಷಗಳಿಂದ ಸ್ಪರ್ಧೆ ಏರ್ಪಡಿಸುತ್ತ ಬರಲಾಗಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಜುಲೈ ತಿಂಗಳಲ್ಲಿ ನಡೆಯಲಿದೆ’ ಎಂದು ಅಕ್ಷರ ಸಾಹಿತ್ಯ ವೇದಿಕೆ ತಿಳಿಸಿದೆ.

ಮಣಿಕಂಠ ಗೊದಮನಿ, ಹಾವೇರಿಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದಲ್ಲಿ ಬಿ.ಎ. ಪ್ರಥಮ ವರ್ಷದಲ್ಲಿ ಓದುತ್ತಿದ್ದಾರೆ. 2021ರಲ್ಲಿ ಇವರ ‘ಉರಿದೊಡಲ ಬೇಗೆ’ ಕವನ ಸಂಕಲನಕ್ಕೆ ‘ವಿದ್ಯಾಸಾಗರ ಬಾಲ ಪುರಸ್ಕಾರ’ ದೊರೆತಿದೆ. ಸುರಗಿ ಪ್ರತಿಷ್ಠಾನ ಕವನ ಸ್ಪರ್ಧೆಯಲ್ಲೂ ಬಹುಮಾನ ಪಡೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.