ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿ | ಅಗ್ನಿವೀರ ವಾಯು ಆಯ್ಕೆ ಪರೀಕ್ಷೆ; ಆನ್‌ಲೈನ್ ಅರ್ಜಿ ಅಹ್ವಾನ

Published 31 ಜನವರಿ 2024, 13:55 IST
Last Updated 31 ಜನವರಿ 2024, 13:55 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಭಾರತೀಯ ವಾಯುಪಡೆಯ ಅಗ್ನಿಪಥ ಯೋಜನೆಯಡಿಯಲ್ಲಿ ಅಗ್ನಿವೀರ ವಾಯು ಆಯ್ಕೆ ಪರೀಕ್ಷೆಗಾಗಿ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಪಿಯುಸಿ, 10+2 ತತ್ಸಮಾನ ಪರೀಕ್ಷೆಯಲ್ಲಿ ಶೇ 50 ಅಂಕಗಳೊಂದಿಗೆ ಅಥವಾ ಡಿಪ್ಲೊಮಾ ಕನಿಷ್ಠ ಶೇ 50 ಅಂಕಗಳೊಂದಿಗೆ ಹಾಗೂ ಇಂಗ್ಲೀಷ್ ವಿಷಯದಲ್ಲಿ ಕನಿಷ್ಠ ಶೇ 50 ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು. 2004ರ ಜನವರಿ 2ರಿಂದ 2007ರ ಜುಲೈ 2ರ ನಡುವೆ ಜನಿಸಿರುವ ಅಭ್ಯರ್ಥಿಗಳು ಫೆಬ್ರುವರಿ 6ರೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 

ಹೆಚ್ಚಿನ ಮಾಹಿತಿಗೆ https://careerindianairforce.cdac.in ಮತ್ತು ಆನ್‌ಲೈನ್ ನೋಂದಣಿಗಾಗಿ https://agnipathvayu.cdac.in ವೆಬ್‌ಸೈಟ್‌ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT