ಅಳ್ನಾವರ: ತಾಲ್ಲೂಕಿನ ಕಡಬಗಟ್ಟಿ ಗ್ರಾಮದ ಗ್ರಾಮದೇವಿ ದೇವಸ್ಥಾನದಲ್ಲಿ ಮಂಗಳವಾರ ಪಿಂಚಣಿದಾರರ ಅಹವಾಲು ಆಲಿಕೆ ಸಭೆ ನಡೆಯಿತು. ಅಧಿಕಾರಿಗಳು ಸಾರ್ವಜನಿಕರ ದೂರು ಸ್ವೀಕರಿಸಿ, ಪರಿಹಾರ ಒದಗಿಸುವ ಭರವಸೆ ನೀಡಿದರು.

ಸರ್ಕಾರದ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳಿಗೆ ಕಳೆದ ಕೆಲ ತಿಂಗಳಿನಿಂದ ಮಾಸಾಶನ ಹಣ ಬಾರದಿರುವ ಕುರಿತು ಈಚೆಗೆ ಗ್ರಾಮದಲ್ಲಿ ನಡೆದ ಸಭೆಯಲ್ಲಿ ಪ್ರಸ್ತಾಪವಾಗಿತ್ತು. ಈ ಹಿನ್ನೆಲೆಯಲ್ಲಿ, ಕಂದಾಯ ಇಲಾಖೆಯ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸಿದರು.

300ಕ್ಕೂ ಅಧಿಕ ಪಿಂಚಣಿದಾರರಿಗೆ ಹಣ ಬಾರದೆ ತೊಂದರೆ ಉಂಟಾಗಿದೆ. ಮಾಸಾಶನ ಮರು ಪ್ರಾರಂಭಕ್ಕಾಗಿ ಅಗತ್ಯ ದಾಖಲೆಗಳನ್ನು ಸಂಗ್ರಹಿಸಿ ಕಚೇರಿಗಳಿಗೆ ಅಲೆಯಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ಫಲಾನುಭವಿಗಳು ಹೇಳಿದರು.

ಕಂದಾಯ ಅಧಿಕಾರಿಗಳು ಅಗತ್ಯ ದಾಖಲೆಗಳನ್ನು ಸ್ವೀಕರಿಸಿ, ‘ನೈಜ ಫಲಾನುಭವಿಗಳಿಗೆ ಯಾವುದೇ ತೊಂದರೆ ಆಗದಂತೆ ಮಾಸಾಶನವನ್ನು ಶೀಘ್ರವೇ ಮರು ಆರಂಭಿಸಲಾಗುವುದು’ ಎಂದು ತಿಳಿಸಿದರು.

ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ತಾಲ್ಲೂಕು ಘಟಕದ ಅಧ್ಯಕ್ಷ ವಿನಾಯಕ ಕುರುಬರ ಮಾತನಾಡಿ, ಅರ್ಹ ಪಿಂಚಣಿದಾರರಿಗೆ ಸಕಾಲದಲ್ಲಿ ಮಾಸಾಶನ ವಿತರಣೆ ಆಗುವಂತೆ ಕ್ರಮ ಕೈಗೊಳ್ಳಬೇಕು ಎಂದರು.

ಗ್ರಾಮದ ಶಿವಾನಂದ ಗೋವಿನಕೊಪ್ಪ ನೇತೃತ್ವದಲ್ಲಿ ಕಡಬಗಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೂಲಿಕೇರಿ, ಕಡಬಗಟ್ಟಿ, ಕಾಶೇನಟ್ಟಿ ಗ್ರಾಮಗಳ ಫಲಾನುಭವಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಉಪತಹಶೀಲ್ದಾರ್ ಮಲ್ಲಿಕಾರ್ಜುನ ಬಿರಾದಾರ, ಕಂದಾಯ ನಿರೀಕ್ಷಕ ಸಂಪತಕುಮಾರ ಗುರು ಒಡೆಯರ, ಗ್ರಾಮ ಆಡಳಿತಾಧಿಕಾರಿ ತಯ್ಯಬಾ ಚೌದರಿ, ಪಿಡಿಒ ಆನಂದ ಪಾಟೀಲ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-24-408590409

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.