ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧಾರವಾಡ: 100 ಹಾಸಿಗೆ ವ್ಯವಸ್ಥೆ: ಸಚಿವ ಭರವಸೆ

ಅಳ್ನಾವರ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡ ಉದ್ಘಾಟನೆ
Last Updated 12 ಜನವರಿ 2022, 5:28 IST
ಅಕ್ಷರ ಗಾತ್ರ

ಅಳ್ನಾವರ: ಹೊಸ ತಾಲ್ಲೂಕು ಕೇಂದ್ರಗಳಾದ ಅಳ್ನಾವರ ಹಾಗೂ ಅಣ್ಣಿಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ತಾಲ್ಲೂಕು ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲಾಗುತ್ತದೆ ಎಂದು ಸಚಿವ ಶಂಕರ ಪಾಟೀಲ ಮನೇನಕೊಪ್ಪ ಹೇಳಿದರು.

ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡವನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿ, ₹ 1.80 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ಕಟ್ಟಲಾಗಿದೆ. ಆಸ್ಪತ್ರೆಗೆ ಬೇಕಾದ ಅಗತ್ಯ ಸೌಲಭ್ಯ ಒದಗಿಸಲಾಗುವುದು. ಅಗತ್ಯವಿರುವ ಎಲ್ಲ ಉಪಕರಣ ನೀಡಲಾಗುವುದು ಎಂದರು. ಹೆರಿಗೆ ವಿಭಾಗಕ್ಕೆ ಬೇಕಾದ ಸಕಲ ಸೌಲಭ್ಯ ನೀಡಲಾಗುವುದು. ಬರುವ ದಿನದಲ್ಲಿ ಇದನ್ನು 100 ಹಾಸಿಗೆಯ ಆಸ್ಪತ್ರೆ ಮಾಡುವ ಯೋಚನೆ ಇದೆ ಎಂದರು.

ಕಲಘಟಗಿ ಮತ ಕ್ಷೇತ್ರದಲ್ಲಿ ಜಲ ಜೀವನ್ ಮಿಷನ್ ಕಾರ್ಯಕ್ರಮ ಯಶಸ್ವಿಯಾಗಿ ಅನುಷ್ಠಾನವಾಗುತ್ತಿದೆ. ಈ ಭಾಗದಲ್ಲಿ ಅತಿವೃಷ್ಟಿಯಿಂದ ಸಾಕಷ್ಟು ಕೆರೆಗಳು ಒಡೆದಿವೆ. ಈ ಕೆರೆಗಳ ದುರಸ್ತಿಗೆ ಸಣ್ಣ ನೀರಾವರಿ ಇಲಾಖೆ ಅನುದಾನ ಬಿಡುಗಡೆ ಮಾಡಿದೆ ಎಂದರು.

ನೂತನ ಆಸ್ಪತ್ರೆಯ ವಿವಿಧ ವಿಭಾಗಗಳಿಗೆ ಸಚಿವರು ಭೇಟಿ ನೀಡಿ ಮಾಹಿತಿ ಪಡೆದರು. ಹೆರಿಗೆ ವಿಭಾಗಕ್ಕೆ ಭೇಟಿ ನೀಡಿ ಬಾಣಂತಿಯರ ಆರೋಗ್ಯ ವಿಚಾರಿಸಿದರು. ರೋಗಿಗಳ ಜೊತೆ ಮಾತನಾಡಿ, ಚಿಕಿತ್ಸೆ ವ್ಯವಸ್ಥೆ ಹೇಗಿದೆ ಎಂದು ಕೇಳಿದರು. ಶಾಸಕ ಸಿ.ಎಂ. ನಿಂಬಣ್ಣವರ, ಪಟ್ಟಣ ಪಂಚಾಯ್ತಿ ಅಧ್ಯಕ್ಷೆ ಮಂಗಳಾ ರವಳಪ್ಪನವರ, ಉಪಾಧ್ಯಕ್ಷ ನದೀಮ ಕಾಂಟ್ರ್ಯಾಕ್ಟರ್, ಡಿಎಚ್‌ಒ ಡಾ. ಯಶವಂತ ಮದೀನಕರ, ತಹಶೀಲ್ದಾರ್ ಅಮರೇಶ ಪಮ್ಮಾರ,
ಡಾ. ಅಯ್ಯನಗೌಡ ಪಾಟೀಲ, ಕರ್ನಾಟಕ ರಾಜ್ಯ ರೇಷ್ಮೆ ಮಾರಾಟ ಮಂಡಳದ ಅಧ್ಯಕ್ಷೆ ಸವಿತಾ ಅಮರಶೆಟ್ಟಿ , ಜಿಲ್ಲಾ ಪಂಚಾಯ್ತಿ ಸಿಇಒ ಡಾ. ಸುಶೀಲಾ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಪಿ. ಕೃಷ್ಣಕಾಂತ, ಡಾ. ತನುಜಾ, ಜೆ.ಬಿ. ಜಾಧವ, ಡಾ. ಅಯ್ಯನಗೌಡ ಪಾಟೀಲ, ಎಂ.ಸಿ. ಹಿರೇಮಠ, ಕೃಷ್ಣ ಅಷ್ಟೇಕರ, ಅಮೂಲ ಗುಂಜೀಕರ, ಜೈಲಾನಿ ಸುದರ್ಜಿ , ಸುನಂದಾ ಕಲ್ಲು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT