ಏಳು ಮಕ್ಕಳ ತಾಯಿಗೆ ಉಡಿ ತುಂಬಿದ ಭಕ್ತರು

ಅಳ್ನಾವರ: ಇಲ್ಲಿನ ನೆಹರೂ ನಗರ ಬಡಾವಣೆಯ ಏಳು ಮಕ್ಕಳ ತಾಯಿಯ ಆಲಯದ 7ನೇ ವಾರ್ಷಿಕೋತ್ಸವ ಶ್ರದ್ಧಾ, ಭಕ್ತಿಯಿಂದ ನಡೆಯಿತು. ಏಳು ಮಕ್ಕಳ ತಾಯಿ ಹಾಗೂ ಶ್ರೀ ಗುರುದತ್ತಾತ್ರೇಯ ಸೇವಾ ಸಮಿತಿ ಅವರು ವಿವಿಧ ಧಾರ್ಮಿಕ ಕಾರ್ಯಗಳನ್ನು ಹಮ್ಮಿಕೊಂಡಿದ್ದರು.
ಬೆಳಿಗ್ಗೆ ವಿಶೇಷ ಪೂಜೆ, ಅಭಿಷೇಕ ನಡೆಯಿತು. ಭಕ್ತರು ಬೆಳಿಗ್ಗೆಯಿಂದ ಸಂಜೆಯವರೆಗೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ದರ್ಶನ ಪಡೆದರು. ಸಂಜೆ ಉಡಿ ತುಂಬುವ ಕಾರ್ಯಕ್ರಮ ನಡೆಯಿತು. ದೇವಾಲಯಕ್ಕೆ ಹೂವಿನ ಹಾಗೂ ವಿದ್ಯುತ್ ದೀಪಗಳ ಅಲಂಕಾರ ಮಾಡಲಾಗಿತ್ತು.
ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ಪಟ್ಟಣ ಹಾಗೂ ಸುತ್ತ ಮುತ್ತಲಿನ ಗ್ರಾಮಸ್ಥರು ಆಗಮಿಸಿದ್ದರು. ಮಕ್ಕಳ ಆಟಿಕೆ ಸಾಮಾಗ್ರಿ ಮಾರಾಟ ಜೋರಾಗಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.