ಅಳ್ನಾವರ: ‘ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಯುವನಿಧಿ ಕೂಡ ಒಂದು. ಯುವ ಜನತೆಯ ಉಜ್ವಲ ಭವಿಷ್ಯಕ್ಕಾಗಿ ಈ ಯೋಜನೆ ತರಲಾಗಿದ್ದು, ನಿರುದ್ಯೋಗಿ ಯುವಜನರು ಇದರ ಲಾಭ ಪಡೆದುಕೊಳ್ಳಿ’ ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ತಾಲ್ಲೂಕು ಅಧ್ಯಕ್ಷ ವಿನಾಯಕ ಕುರುಬರ ಹೇಳಿದರು.
ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಭವನದಲ್ಲಿ ಗುರುವಾರ ನಡೆದ ಯುವನಿಧಿ ಯೋಜನೆ ಅರಿವು ಕಾರ್ಯಕ್ರಮದಲ್ಲಿ ಯೋಜನೆಯ ಮಾಹಿತಿಯುಳ್ಳ ಭಿತ್ತಿಚಿತ್ರ ಬಿಡುಗಡೆಗೊಳಿಸಿ ಅವರು ಮಾತನಾಡಿ, ‘ತಾಲ್ಲೂಕಿನ 112 ಪಧವೀದರರು ಯೋಜನೆಯ ಲಾಭ ಪಡೆದುಕೊಳ್ಳುತ್ತಿದ್ದಾರೆ’ ಎಂದರು.
‘ಗ್ಯಾರಂಟಿ ಯೋಜನೆ ತಾಲ್ಲೂಕು ಸಮಿತಿ ವತಿಯಿಂದ ಈಗಾಗಲೇ ಉದ್ಯೋಗ ವಿನಿಮಯ ಕಚೇರಿಯ ಸಿಬ್ಬಂದಿಯನ್ನು ಕಾಲೇಜಿಗೆ ಕರೆಯಿಸಿ ವಿದ್ಯಾರ್ಥಿಗಳ ನೋಂದಣಿ ಮಾಡಿಸಿ ಜಾಬ್ ಕಾರ್ಡ್ ಹಂಚಲಾಗಿದೆ. ಬರುವ ದಿನದಲ್ಲಿ ಉದ್ಯೋಗ ಮೇಳ ಹಮ್ಮಿಕೊಳ್ಳುವ ಉದ್ದೇಶ ಇದೆ’ ಎಂದರು.
ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ತರಬೇತುದಾರ ನಾಗರಾಜ ಬಡಿಗೇರ, ಅರ್ಜಿ ಹೇಗೆ ಸಲ್ಲಿಸಬೇಕು, ಶೈಕಣಿಕ ದಾಖಲಾತಿ, ಅರ್ಹತೆ, ನೋಂದಣಿ ಪ್ರಕ್ರಿಯೆ ಮಾಹಿತಿ ನೀಡಿದರು.
ಪ್ರಾಂಶುಪಾಲೆ ಈ. ನಾಗರತ್ನಾ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಜಿಲ್ಲಾ ಉದ್ಯೋಗಾಧಿಕಾರಿ ಪಿ.ಎ. ಬಸವಂತ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯರಾದ ಮಲ್ಲಿಕ ಅಂಚಿ, ಸತೀಸ ಬಡಸ್ಕರ್, ಎಂ.ಕೆ. ಬಾಗವಾನ, ಪುಷ್ಟಾವತಿ ಆನಂತಪೂರ, ಸಲೀಂ ತಡಕೋಡ, ರಾಹುಲ್ ಶಿಂದೆ, ಹಿರಿಯರಾದ ಹಸೇನಅಲಿ ಶೇಖ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಚನ್ನಬಸವರಾಜ ಚಾರಿ, ಅಶೋಕ, ಪರಶುರಾಮ ಮಿಂಡೊಳ್ಕರ, ಅಂದಾನೆಪ್ಪ ಕಾಳೆ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.