ಹುಬ್ಬಳ್ಳಿ: ನಗರದಲ್ಲಿ ನಡೆದ ವಾಸ್ತುತಜ್ಞ ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಎಡಿಜಿಪಿ ಅಲೋಕ್ ಕುಮಾರ್ ಗುರುವಾರ ಹತ್ಯೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹೋಟೆಲ್ ಭದ್ರತಾ ವ್ಯವಸ್ಥೆ ಕುರಿತು ಮಾಹಿತಿ ಪಡೆದರು. ಉದ್ಯಮಿಗಳು ಸೇರಿದಂತೆ ದೊಡ್ಡ ದೊಡ್ಡ ವ್ಯಕ್ತಿಗಳು ಭೇಟಿ ನೀಡುವ ಹೋಟೆಲ್‌ನ ಪ್ರವೇಶದ್ವಾರದಲ್ಲಿ ಮೆಟಲ್ ಡಿಟೆಕ್ಟರ್ ವ್ಯವಸ್ಥೆ ಹಾಗೂ ವ್ಯಕ್ತಿಗಳ ತಪಾಸಣೆ ಮಾಡದೆ ಹಾಗೆಯೇ ಬಿಡುವುದರ ಕುರಿತು, ಹೋಟೆಲ್ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು.
ನಂತರ ವಿದ್ಯಾನಗರ ಠಾಣೆಗೆ ಬಂದ ಅವರು, ಪ್ರಕರಣದ ತನಿಖೆಯ ಬೆಳವಣಿಗೆ ಕುರಿತು ಮಾಹಿತಿ ಪಡೆದರು.ಪೊಲೀಸ್ ಕಮಿಷನರ್ ಲಾಭೂರಾಮ್,ಡಿಸಿಪಿಗಳಾದ ಗೋಪಾಲ ಬ್ಯಾಕೋಡ, ಸಾಹಿಲ್ ಬಾಗ್ಲಾ, ಎಸಿಪಿ ವಿನೋದ ಮುಕ್ತೇದಾರ ಹಾಗೂ ಇನ್ಸ್‌ಪೆಕ್ಟರ್‌ಗಳು ಇದ್ದರು.
ಇವನ್ನೂ ಓದಿ...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.