ಬುಧವಾರ, ಏಪ್ರಿಲ್ 21, 2021
29 °C

26ಕ್ಕೆ ಪರ್ಯಾಯ ರೈತ ಗಣರಾಜ್ಯೋತ್ಸವ: ಕುರುಬೂರು ಶಾಂತಕುಮಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ದೆಹಲಿಯಲ್ಲಿ ನಡೆದಿರುವ ರೈತರ ಹೋರಾಟ ಬೆಂಬಲಿಸಿ ಜ.26 ರಂದು ಬೆಂಗಳೂರಿನಲ್ಲಿ ರೈತರ ಗಣರಾಜ್ಯೋತ್ಸವ ರ್ಯಾಲಿ ಹಮ್ಮಿಕೊಳ್ಳಲಾಗಿದೆ  ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ ಹೇಳಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  52 ದಿನಗಳಿಂದ ರೈತರು  ಹೋರಾಟ ಮಾಡಿ ತಮ್ಮ ಪ್ರಾಣ ಬಲಿದಾನ ಮಾಡಿದ್ದಾರೆ. ಆದರೆ ಕೇಂದ್ರ ಸರ್ಕಾರ ಇಲ್ಲಿಯವರೆಗೂ ಸಮಸ್ಯೆ ಬಗೆಹರಿಸಿಲ್ಲ. ರೈತರ ಬಗ್ಗೆ ಕಾಳಜಿ ಇಲ್ಲ. ಪ್ರಜಾಪ್ರಭುತ್ವ ವಿರೋಧಿ ಕೃಷಿ ಕಾಯ್ದೆ ಜಾರಿಗೆ ತರಲಾಗಿದೆ. ಚಳವಳಿ ಹತ್ತಿಕ್ಕಲು ವಾಮಮಾರ್ಗ ಅನುಸರಿ ಸುತ್ತಿದೆ. ಆದರೆ ಯಾವುದೇ ವಾಮಮಾರ್ಗಕ್ಕೆ ರೈತರು ಬಗ್ಗುವದಿಲ್ಲ ಎಂದು ಎಚ್ಚರಿಕೆ ನೀಡಿದರು.

ಜ. 26ರಂದು ಪರ್ಯಾಯ ಗಣರಾಜೋತ್ಸವ ಪರೆಡ್ ದೇಶದ ಉದ್ದಗಲಕ್ಕೂ ಮಾಡಲಾಗುತ್ತಿದೆ. ಬೆಂಗಳೂರಿನಲ್ಲಿ 15 ಸಾವಿರಕ್ಕೂ ಹೆಚ್ಚು ವಾಹನಗಳ ಪರೆಡ್ ಮಾಡಲಾಗುವುದು ಎಂದರು.

ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ವೀರನಗೌಡ ಪಾಟೀಲ, ಎಂ.ವಿ.ಗಾಡಿ, ಎಂ.ಜಿ.ಸಿಂದಗಿ, ಎನ್.ಎಚ್.ದೇವಕುಮಾರ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು