ಶನಿವಾರ, ಮೇ 28, 2022
31 °C
ತಾಲ್ಲೂಕು ಆಡಳಿತದಿಂದ ಅಂಬಿಗರ ಚೌಡಯ್ಯ ಜಯಂತಿ ಆಚರಣೆ

ಹುಬ್ಬಳ್ಳಿ: ಮೂಢನಂಬಿಕೆ ಖಂಡಿಸಿದ ಚೌಡಯ್ಯ- ಪ್ರಕಾಶ ನಾಶಿ,

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಬ್ಬಳ್ಳಿ: ಶರಣ ಅಂಬಿಗರ ಚೌಡಯ್ಯ ಅವರ 902ನೇ ಜಯಂತಿಯನ್ನು ತಾಲ್ಲೂಕು ಆಡಳಿತದ ವತಿಯಿಂದ ಇಲ್ಲಿನ ಮಿನಿ ವಿಧಾನಸೌಧದಲ್ಲಿ ಶುಕ್ರವಾರ ಆಚರಿಸಲಾಯಿತು. ಕೋವಿಡ್–19 ಹಿನ್ನೆಲೆಯಲ್ಲಿ ಅಧಿಕಾರಿಗಳು ಹಾಗೂ ಸಮುದಾಯದ ಕೆಲವೇ ಆಹ್ವಾನಿತ ಮುಖಂಡರ ಸಮ್ಮುಖದಲ್ಲಿ ಸರಳವಾಗಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರ್ ಪ್ರಕಾಶ ನಾಶಿ, ‘ಬಸವಣ್ಣನವರ ಅನುಯಾಯಿ ಆಗಿದ್ದ ಅಂಬಿಗರ ಚೌಡಯ್ಯ ಅವರು ತಮ್ಮ ವಚನಗಳ ಮೂಲಕ ಸಮಾಜದ ಕಂದಾಚಾರ ಮತ್ತು ಮೂಢನಂಬಿಕೆಗಳನ್ನು ಖಂಡಿಸಿದರು. ಕಾಯಕದ ಮಹತ್ವ ಒತ್ತಿ ಹೇಳಿದರು’ ಎಂದರು.

ಗಣ್ಯರು ಹಾಗೂ ಅಧಿಕಾರಿಗಳು ಚೌಡಯ್ಯ ಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಗಂಗಾಧರ ಕಂದಕೂರ, ಸಮಾಜ ಕಲ್ಯಾಣ ಇಲಾಖೆ ಸಹಾಯ ನಿರ್ದೇಶಕಿ ನಂದಾ ಹಣಬರಟ್ಟಿ, ಗಂಗಾಮತಸ್ಥ ಹಿತರಕ್ಷಣಾ ಸಂಘದ ಹುಬ್ಬಳ್ಳಿ ತಾಲ್ಲೂಕು ಘಟಕದ ಅಧ್ಯಕ್ಷ ಅಶೋಕಕುಮಾರ ಬೆಸ್ತ, ಸಮಾಜದ ಮುಖಂಡರಾದ ಎಸ್.ಟಿ. ದೊಡ್ಡಮನಿ, ನಾಗರಾಜ ಅಂಬಿಗೇರ, ಯಲ್ಲಪ್ಪ ಅಳಗವಾಡಿ, ಮಂಜುನಾಥ ಭೈರಣ್ಣವರ, ಶಿವಾನಂದ ಅಂಬೀಗೇರ,‌ ಶಿವಾನಂದ ಬಾರಕೇರ ಹಾಗೂ ಕಲ್ಲಣಗೌಡ ಭರಮಗೌಡರ ಇದ್ದರು.

ಶಿವಕುಮಾರ ಸ್ವಾಮೀಜಿ ಸ್ಮರಣೆ

ತ್ರಿವಿಧ ದಾಸೋಹಿ ತುಮಕೂರಿನ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರ ಮೂರನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ, ತಾಲ್ಲೂಕು ಆಡಳಿತದಿಂದ ಇದೇ ಸಂದರ್ಭದಲ್ಲಿ ದಾಸೋಹ ದಿನ ಆಚರಿಸಲಾಯಿತು.

ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರ್ ಪ್ರಕಾಶ ನಾಶಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಗಂಗಾಧರ ಕಂದಕೂರ, ಸಮಾಜ ಕಲ್ಯಾಣ ಇಲಾಖೆ ಸಹಾಯ ನಿರ್ದೇಶಕಿ ನಂದಾ ಹಣಬರಟ್ಟಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸ್ವಾಮೀಜಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ: ಕೇಂದ್ರ ಕಚೇರಿಯಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಅವರ ಜಯಂತಿ ಆಚರಿಸಲಾಯಿತು.

ಸಾರ್ವಜನಿಕ ಸಂಪರ್ಕಾಧಿಕಾರಿ ಪಿ.ಆರ್. ಕಿರಣಗಿ ಮಾತನಾಡಿ, ಅಂಬಿಗರ ಚೌಡಯ್ಯ ಅವರು ನೇರ ನಡೆ ಹಾಗೂ ನಿಷ್ಠುರ ವ್ಯಕ್ತಿತ್ವದ ವಚನಕಾರರಾಗಿದ್ದರು. ಸಮಾಜದಲ್ಲಿರುವ ಮೇಲು, ಕೀಳು, ಮೂಢನಂಬಿಕೆ, ಡಂಭಾಚಾರಗಳನ್ನು ಯಾವುದೇ ಅಳುಕಿಲ್ಲದೆ ತಮ್ಮ ವಚನಗಳ ಮೂಲಕ ಟೀಕಿಸಿದ್ದಾರೆ. ಅವರ ನೇರ ನುಡಿಯ ವ್ಯಕ್ತಿತ್ವ ರೂಢಿಸಿಕೊಳ್ಳುವ ಅವಶ್ಯಕತೆ ಇದೆ ಎಂದರು.

ಮುಖ್ಯ ಸಂಚಾರ ವ್ಯವಸ್ಥಾಪಕ ರಾಜೇಶ ಹುದ್ದಾರ, ಮುಖ್ಯ ಭದ್ರತಾ ಮತ್ತು ಜಾಗೃತಾಧಿಕಾರಿ ಬಸಲಿಂಗಪ್ಪ ಬೀಡಿ, ಮುಖ್ಯ ಕಾರ್ಮಿಕ & ಕಲ್ಯಾಣ ಅಧಿಕಾರಿ ಕೊಟ್ರಪ್ಪ, ಮುಖ್ಯ ಯೋಜನಾ ಮತ್ತು ಅಂಕಿ ಸಂಖ್ಯಾಧಿಕಾರಿ ಎಂ.ಆರ್. ಮುಂಜಿ, ಮುಖ್ಯ ಸಿಬ್ಬಂದಿ ವ್ಯವಸ್ಥಾಪಕಿ ವಿಜಯಶ್ರೀ ನರಗುಂದ, ಮುಖ್ಯ ಲೆಕ್ಕಾಧಿಕಾರಿ ಮಂಜುಳಾ ನಾಯಕ, ವಿರೂಪಾಕ್ಷ ಕಟ್ಟಿಮನಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು