ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿ: ಅಂಬಿಗರ ಚೌಡಯ್ಯ ಜಯಂತಿ ಆಚರಣೆ

Last Updated 21 ಜನವರಿ 2022, 13:31 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಶರಣ ಅಂಬಿಗರ ಚೌಡಯ್ಯ ಅವರ 902ನೇ ಜಯಂತಿಯನ್ನು ತಾಲ್ಲೂಕು ಆಡಳಿತದ ವತಿಯಿಂದ ಇಲ್ಲಿನ ಮಿನಿ ವಿಧಾನಸೌಧದಲ್ಲಿ ಶುಕ್ರವಾರ ಆಚರಿಸಲಾಯಿತು. ಕೋವಿಡ್–19 ಹಿನ್ನೆಲೆಯಲ್ಲಿ ಅಧಿಕಾರಿಗಳು ಹಾಗೂ ಸಮುದಾಯದ ಕೆಲವೇ ಆಹ್ವಾನಿತ ಮುಖಂಡರ ಸಮ್ಮುಖದಲ್ಲಿ ಸರಳವಾಗಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರ್ ಪ್ರಕಾಶ ನಾಶಿ, ‘ಬಸವಣ್ಣನವರ ಅನುಯಾಯಿ ಆಗಿದ್ದ ಅಂಬಿಗರ ಚೌಡಯ್ಯ ಅವರು, ತಮ್ಮ ವಚನಗಳ ಮೂಲಕ ಸಮಾಜದ ಕಂದಾಚಾರ ಮತ್ತು ಮೂಢನಂಬಿಕೆಗಳನ್ನು ಖಂಡಿಸಿದರು. ಕಾಯಕದ ಮಹತ್ವವನ್ನು ಒತ್ತಿ ಹೇಳಿದರು’ ಎಂದರು.

ಗಣ್ಯರು ಹಾಗೂ ಅಧಿಕಾರಿಗಳು ಚೌಡಯ್ಯ ಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಗಂಗಾಧರ ಕಂದಕೂರ, ಸಮಾಜ ಕಲ್ಯಾಣ ಇಲಾಖೆ ಸಹಾಯ ನಿರ್ದೇಶಕಿ ನಂದಾ ಹಣಬರಟ್ಟಿ, ಗಂಗಾಮತಸ್ಥ ಹಿತರಕ್ಷಣಾ ಸಂಘದ ಹುಬ್ಬಳ್ಳಿ ತಾಲ್ಲೂಕು ಘಟಕದ ಅಧ್ಯಕ್ಷ ಅಶೋಕ ಕುಮಾರ ಬೆಸ್ತ, ಸಮಾಜದ ಮುಖಂಡರಾದ ಎಸ್.ಟಿ. ದೊಡ್ಡಮನಿ, ನಾಗರಾಜ ಅಂಬಿಗೇರ, ಕುರಿಯವರ, ಯಲ್ಲಪ್ಪ ಅಳಗವಾಡಿ, ಮಂಜುನಾಥ ಭೈರಣ್ಣವರ, ಶಿವಾನಂದ ಅಂಬೀಗೇರ,‌ ಶಿವಾನಂದ ಬಾರಕೇರ ಹಾಗೂ ಕಲ್ಲಣಗೌಡ ಭರಮಗೌಡರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT