ಶನಿವಾರ, ಫೆಬ್ರವರಿ 22, 2020
19 °C

ದೆಹಲಿಗೆ ಹಿಂದಿರುಗಿದ ಅಮಿತ್ ಶಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಸಂಸದ ಪ್ರಹ್ಲಾದ ಜೋಶಿ ಅವರ ಮನೆಯಲ್ಲಿ ಮಗುವಿಗೆ ಪಲ್ಸ್‌ ಪೊಲೀಯೊ ಲಸಿಕೆ ಹಾಕಿದರು.

ಜೋಶಿ ಅವರ ಮನೆಯಲ್ಲಿಯೇ ಉಪಾಹಾರ ಸೇವಿಸಿ, ಕಾರ್ಯಕರ್ತರೊಂದಿಗೆ ಕೆಲ ಸಮಯ ಮಾತನಾಡಿದರು. ನಂತರ ವಾಯುಮಾರ್ಗವಾಗಿ ದೆಹಲಿಗೆ ಹಿಂದಿರುಗಿದರು.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಉಪಸ್ಥಿತರಿದ್ದರು.

ಹುಬ್ಬಳ್ಳಿಯಲ್ಲಿ ಶನಿವಾರ ಪೌರತ್ವ ತಿದ್ದುಪಡಿ ಮಸೂದೆ ಕುರಿತು ಜನಜಾಗೃತಿ ಮೂಡಿಸಲೆಂದು ಆಯೋಜಿಸಿದ್ದ ಬೃಹತ್ ಸಮಾವೇಶದಲ್ಲಿ ಅವರು ಭಾಷಣ ಮಾಡಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು