ಭಾನುವಾರ, ಮೇ 22, 2022
25 °C

ಹುಬ್ಬಳ್ಳಿ: ಕೋವಿಡ್–19- ಆನಂದನಗರ ಪ್ರೌಢಶಾಲೆ ಸೀಲ್‌ಡೌನ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಬ್ಬಳ್ಳಿ: ಹಳೇ ಹುಬ್ಬಳ್ಳಿಯ ಆನಂದನಗರದಲ್ಲಿರುವ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಕೋವಿಡ್–19 ದೃಢಪಟ್ಟಿರುವುದರಿಂದ ಶಾಲೆಯನ್ನು ಶನಿವಾರ ಸೀಲ್‌ಡೌನ್ ಮಾಡಲಾಯಿತು.

ಶಾಲೆಯಲ್ಲಿ ಇತ್ತೀಚೆಗೆ ಕೋವಿಡ್ ತಪಾಸಣೆ ನಡೆದಿತ್ತು. ಇಂದು ವರದಿ ಬಂದ ವರದಿಯಲ್ಲಿ ಇಬ್ಬರು ಶಿಕ್ಷಕರು ಹಾಗೂ 12 ವಿದ್ಯಾರ್ಥಿಗಳು ಸೋಂಕು ಇರುವುದು ದೃಢಪಟ್ಟಿದೆ.

ವಿಷಯ ತಿಳಿಯುತ್ತಲೇ ಸ್ಥಳಕ್ಕೆ ಸ್ಥಳೀಯ ಆರೋಗ್ಯ ಸಿಬ್ಬಂದಿಯೊಂದಿಗೆ ಶಾಲೆಗೆ ತೆರಳಿ, ಐದು ದಿನಗಳವರೆಗೆ ಸೀಲ್‌ಡೌನ್ ಮಾಡಲಾಯಿತು ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು