ಭಾನುವಾರ, ಜನವರಿ 19, 2020
20 °C

ಅಂಗನವಾಡಿ ಕಾರ್ಯಕರ್ತೆಯರಿಂದ ‘ಬೆಂಗಳೂರು ಚಲೋ’ 26ಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ನಿವೃತ್ತಿಯಾಗಿರುವ ಹಾಗೂ ಮಂದಿನ ದಿನಗಳಲ್ಲಿ ನಿವೃತ್ತಿಯಾಗಲಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಪಿಂಚಣಿ ಸೌಲಭ್ಯಕ್ಕಾಗಿ ಹಾಗೂ ಈ ಸೇವಾ ಹಿರಿತನದ ಆಧಾರದ ಮೇಲೆ ವೇತನ ನಿಗದಿ ಪಡಿಸುವಂತೆ ಒತ್ತಾಯಿಸಿ ಡಿ.26 ಮತ್ತು 27ರಂದು ಬೆಂಗಳೂರು ಚಲೋ ಹಮ್ಮಿಕೊಳ್ಳಲಾಗಿದೆ.

ಬೆಂಗಳೂರಿನ ಪ್ರೀಡಂ ಪಾರ್ಕ್‌ನಲ್ಲಿ ಎರಡು ದಿನ ಆಹೋರಾತ್ರಿ ಧರಣಿ ನಡೆಸಿ, ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಲಾಗುವುದು ಎಂದು ‌ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್‌ನ ಧಾರವಾಡ ಜಿಲ್ಲಾ ಸಮಿತಿ ಅಧ್ಯಕ್ಷೆ ಎನ್‌.ಎಫ್‌.ಸಮುದ್ರಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ಕಾರ್ಮಿಕರೆಂದು ಪರಿಗಣಿಸಿ ಅವರಿಗೆ ಕೇಂದ್ರ ಸರ್ಕಾರದ 7ನೇ ವೇತನ ಆಯೋಗದಲ್ಲಿ ಒಪ್ಪಿರುವ ₹18 ಸಾವಿರ ಕನಿಷ್ಠ ವೇತನ ನಿಗದಿ ಪಡಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದರು.

ಅಂಗನವಾಡಿ ಕೇಂದ್ರಗಳಲ್ಲೇ ಎಲ್‌ಕೆಜಿ, ಯುಕೆಜಿ ಆರಂಭಿಸಬೇಕು. ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ತೀವ್ರ ಸ್ವರೂಪದ ಕಾಯಿಲೆಗಳಿಂದ ಬಳಲುತ್ತಿರುವಾಗ ಉಚಿತ ಚಿಕಿತ್ಸೆ ಹಾಗೂ ಸಂಬಳ ಸಹಿತ ರಜೆ ಪರಿಗಣಿಸಬೇಕು ಎಂದು ಒತ್ತಾಯಿಸಲಾಗುವುದು ಎಂದು ಹೇಳಿದರು.

ಸಂಘದ ಕಾರ್ಯದರ್ಶಿ ವೀರಪ್ಪ ತುರಾಕಾಣಿ, ಸಂಚಾಲಕ ಎನ್‌.ಎ.ಖಾಜೆ, ರತ್ನ ಶಿರಾವರ, ವಿಜಯಲಕ್ಷ್ಮಿ ಹಿರೇಮಠ, ಸಾವಿತ್ರಿ ಜೀವನಗೌಡ್ರ, ಶಿವಗಂಗಾ ಹೆಬ್ಬಳ್ಳಿ, ಲತಾ ಗೋಡೆ ಇದ್ದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು