ಶುಕ್ರವಾರ, 14 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿ: ಅಂಜಲಿ ಕೊಲೆ ಆರೋಪಿ ಸಿಐಡಿ ವಶಕ್ಕೆ

Published 23 ಮೇ 2024, 0:46 IST
Last Updated 23 ಮೇ 2024, 0:46 IST
ಅಕ್ಷರ ಗಾತ್ರ

ಹುಬ್ಬಳ್ಳಿ: ನಗರದಲ್ಲಿ ನಡೆದ ಅಂಜಲಿ ಅಂಬಿಗೇರ ಹತ್ಯೆಗೆ ಸಂಬಂಧಿಸಿದಂತೆ ಆರೋಪಿ ಗಿರೀಶ ಸಾವಂತನನ್ನು ಸಿಐಡಿ ಅಧಿಕಾರಿಗಳು ಬುಧವಾರ ತಮ್ಮ ವಶಕ್ಕೆ ಪಡೆದರು. 

ದಾವಣಗೆರೆಯಲ್ಲಿ ಚಲಿಸುತ್ತಿದ್ದ ರೈಲಿನಿಂದ ಜಿಗಿದು, ಕೆಳಗೆ ಬಿದ್ದಿದ್ದರಿಂದ ಗಾಯಗೊಂಡಿದ್ದ ಗಿರೀಶಗೆ ನಗರದ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಗೆ ಬಂದು ವಶಕ್ಕೆ ತೆಗೆದುಕೊಂಡ ಸಿಐಡಿ ಅಧಿಕಾರಿಗಳು, ಬೆಂಡಿಗೇರಿ ಪೊಲೀಸ್ ಠಾಣೆಗೆ ಕರೆದೊಯ್ದು ಸುದೀರ್ಘ ವಿಚಾರಣೆ ನಡೆಸಿದರು. ಆತನ ತಾಯಿ ಸವಿತಾ ಅವರನ್ನೂ ವಿಚಾರಣೆ ನಡೆಸಿ, ಹಳೆಯ ಪ್ರಕರಣಗಳ ಬಗ್ಗೆ ಮಾಹಿತಿ ಕಲೆ ಹಾಕಿದರು.

ಘಟನಾ ಸ್ಥಳ ಪರಿಶೀಲನೆ: ಸಿಐಡಿ ಅಧಿಕಾರಿಗಳ ಇನ್ನೊಂದು ತಂಡ ಅಂಜಲಿ ಅಂಬಿಗೇರ ಅವರ ಮನೆಗೆ ಭೇಟಿ ನೀಡಿ, ಪರಿಶೀಲಿಸಿತು. ಅಂಜಲಿ ಅಜ್ಜಿಯಿಂದ ಮಾಹಿತಿ ಪಡೆಯಿತು.

ಸಿಐಡಿ ಎಸ್.ಪಿ. ವೆಂಕಟೇಶ್ ನೇತೃತ್ವದ ಡಿವೈಎಸ್‌ಪಿ ದರ್ಜೆ ಅಧಿಕಾರಿ ಸೇರಿ ಒಟ್ಟು ಎಂಟು ಮಂದಿ ಅಧಿಕಾರಿಗಳ ತಂಡ ಮಂಗಳವಾರ ಹುಬ್ಬಳ್ಳಿಗೆ ಬಂದು, ಬೆಂಡಿಗೇರಿ ಪೊಲೀಸರಿಂದ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಪಡೆದಿತ್ತು. ಬುಧವಾರ ಬೆಳಿಗ್ಗೆ ನವನಗರದ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್‌ ಕಚೇರಿಗೆ ತೆರಳಿ, ಕಮಿಷನರ್ ರೇಣುಕಾ ಸುಕುಮಾರ್‌ ಅವರೊಂದಿಗೆ ಪ್ರಕರಣದ ಬಗ್ಗೆ ಚರ್ಚೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.

ಈ ಪ್ರಕರಣ ಸಂಬಂಧ ಅಮಾನತುಗೊಂಡಿರುವ ಅಧಿಕಾರಿಗಳ ಬಗ್ಗೆಯೂ ತನಿಖೆ ನಡೆಸಿದ್ದಾರೆ. 

ಅನುಚಿತ ವರ್ತನೆ: ಕಿಮ್ಸ್ ಆಸ್ಪತ್ರೆಯಲ್ಲಿ 5 ದಿನಗಳಿಂದ ಗಿರೀಶ ಚಿಕಿತ್ಸೆ ಪಡೆಯುತ್ತಿದ್ದ. ಮಂಗಳವಾರ ಕೊಠಡಿ ಸ್ವಚ್ಛಗೊಳಿಸುವ ಮಹಿಳಾ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದ. ಹೀಗಾಗಿ, ಕೊಠಡಿಗೆ ಎಂಟು ಮಂದಿ ಪೊಲೀಸ್‌ ಸಿಬ್ಬಂದಿಯನ್ನು  ನಿಯೋಜಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT