ಸೋಮವಾರ, 24 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಹುಬ್ಬಳ್ಳಿ: ಆತ್ಮಹತ್ಯೆಗೆ ಯತ್ನಿಸಿದ್ದ ಅಂಜಲಿ ಸಹೋದರಿ ಗುಣಮುಖ

Published 19 ಮೇ 2024, 15:46 IST
Last Updated 19 ಮೇ 2024, 15:46 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಫಿನಾಯಿಲ್ ಸೇವಿಸಿ ಶನಿವಾರ ಆತ್ಮಹತ್ಯೆಗೆ ಯತ್ನಿಸಿದ್ದ, ಈಚೆಗೆ ಕೊಲೆಯಾದ ಇಲ್ಲಿನ ವೀರಾಪುರ ಓಣಿಯ ನಿವಾಸಿ ಅಂಜಲಿ ಅವರ ಸಹೋದರಿ ಯಶೋಧಾಗೆ ಕಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಗುಣಮುಖರಾದ ಯಶೋಧಾ ಭಾನುವಾರ ಮನೆಗೆ ಮರಳಿದ್ದಾರೆ. ಹುಬ್ಬಳ್ಳಿಯಲ್ಲಿ ಶನಿವಾರ ನಡೆದ ಮಠಾಧೀಶರ ಪ್ರತಿಭಟನೆ ವೇಳೆ ಯಶೋಧಾ ಪ್ರಜ್ಞೆ ತಪ್ಪಿ ಬಿದ್ದಿದ್ದರು. ಕೂಡಲೇ ಪ್ರಾಥಮಿಕ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಲಾಗಿತ್ತು. ಆದರೆ, ತಡರಾತ್ರಿ ಫಿನಾಯಿಲ್‌ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು.

‘ಅಕ್ಕ ಅಂಜಲಿಯನ್ನು ಕೊಲೆ ಮಾಡಿದ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುತ್ತಿರುವ ಸುದ್ದಿಯಿಂದ ಯಶೋಧಾ ನೊಂದಿದ್ದಳು. ಇದನ್ನೇ ಮನಸ್ಸಿಗೆ ಹಚ್ಚಿಕೊಂಡು ಫಿನಾಯಿಲ್‌ ಸೇವಿಸಿದ್ದಳು‘ ಎಂದು ಅಜ್ಜಿ ಗಂಗಮ್ಮ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT