ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೈಕ್ಷಣಿಕ ಗುಣಮಟ್ಟ ವೃದ್ಧಿಗೆ ಕಾರ್ಯಾಗಾರ

Last Updated 15 ಡಿಸೆಂಬರ್ 2022, 2:44 IST
ಅಕ್ಷರ ಗಾತ್ರ

ಅಣ್ಣಿಗೇರಿ: ‘ರಾಷ್ಟ್ರೀಯ ಶಿಕ್ಷಣ ನೀತಿ ಹಾಗೂ ಮಾಹಿತಿ ಹಕ್ಕು ಅಧಿನಿಯಮದ ಕುರಿತು ಶಿಕ್ಷಕರಿಗೆ ಮಾಹಿತಿ ನೀಡಲು ಆಯೋಜಿಸಿರುವ ಶೈಕ್ಷಣಿಕ ಕಾರ್ಯಾಗಾರ ಬಹಳ ಉಪಯುಕ್ತವಾಗಿದೆ’ ಎಂದು ಡಿಡಿಪಿಐ ಎಸ್.ಎಸ್. ಕೆಳದಿಮಠ ಹೇಳಿದರು.

ಅಣ್ಣಿಗೇರಿ ಮತ್ತು ನವಲಗುಂದ ತಾಲ್ಲೂಕಿನ ಶಿಕ್ಷಕರಿಗೆ ಹಮ್ಮಿಕೊಂಡಿದ್ದ ಒಂದು ದಿನದ ಶೈಕ್ಷಣಿಕ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

‘ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಿಕೊಳ್ಳಲು ಕಾರ್ಯಾಗಾರ ಸಹಾಯಕ. ಶಿಕ್ಷಕರು ಸಂಪೂರ್ಣವಾಗಿ ಮಾಹಿತಿ ಪಡೆದುಕೊಂಡು ವರ್ಗಕೋಣೆಗಳಲ್ಲಿ ಇದನ್ನು ಪ್ರಸ್ತುತಪಡಿಸಬೇಕು’ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಶಿವಾನಂದ ಮಲ್ಲಾಡ, ‘ಶಿಕ್ಷಕರು ಶೈಕ್ಷಣಿಕ ಕಾರ್ಯಚಟುವಟಿಕೆ, ಕಾರ್ಯಾಗಾರಗಳಲ್ಲಿ ಭಾಗವಹಿಸಿ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು’ ಎಂದರು.

ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಸಿದ್ಧರಾಮ ಮನಹಳ್ಳಿ ಹಾಗೂ ಮಾಹಿತಿ ಹಕ್ಕು ಅಧಿನಿಯಮ ಕುರಿತು ಉಪನ್ಯಾಸಕ ಜೆ.ಎಂ. ರಾಜಶೇಖರ ಮಾತನಾಡಿದರು. 400ಕ್ಕೂ ಹೆಚ್ಚು ಶಿಕ್ಷಕರು ಭಾಗವಹಿಸಿದ್ದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಎಂ. ಹುಡೇದಮನಿ, ಆರ್.ಬಿ. ಮುರನಾಳ, ಎನ್.ಡಿ. ಧಾರವಾಡ, ವೈ.ಎಚ್. ಬಣವಿ, ಎ.ಬಿ.ಕೊಪ್ಪದ, ವಿ.ಎಂ. ಹಿರೇಮಠ, ರಾಜಶೇಖರ ಹೊನ್ನಪ್ಪನವರ, ಎಸ್.ಎಫ್. ನೀರಲಗಿ, ಅನ್ವರ ಹುಬ್ಬಳ್ಳಿ, ಮಂಜುನಾಥ ನಾಯ್ಕ, ಎ.ಎಂ.ದೊಡ್ಡಮನಿ, ಮಹಾಂತೇಶ ವಸ್ತ್ರದ ಹಾಗೂ ತಾಲ್ಲೂಕಿನ ವಿವಿಧ ಶಿಕ್ಷಕರ ಸಂಘಟನೆಗಳ ಪದಾಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT